ಬಿಜೆಪಿ ನಾಯಕರಿಗೆ ಬಿಗ್ ಶಾಕ್!: ನ.8-ಡಿ.31ರ ಬ್ಯಾಂಕ್ ವಹಿವಾಟಿನ ವಿವರ ನೀಡಿ ಎಂದ ಮೋದಿ

ರು.500 ಹಾಗೂ 1,000 ನೋಟುಗಳ ಮೇಲೆ ನಿಷೇಧ ಹೇರಿ ಭ್ರಷ್ಟರು ಹಾಗೂ ತೆರಿಗೆಗಳ್ಳರಿಗೆ ಕಡಿವಾಣ ಹಾಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ತಮ್ಮ ಪಕ್ಷದ ನಾಯಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದು...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ರು.500 ಹಾಗೂ 1,000 ನೋಟುಗಳ ಮೇಲೆ ನಿಷೇಧ ಹೇರಿ ಭ್ರಷ್ಟರು ಹಾಗೂ ತೆರಿಗೆಗಳ್ಳರಿಗೆ ಕಡಿವಾಣ ಹಾಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ತಮ್ಮ ಪಕ್ಷದ ನಾಯಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದು, ನ.8 ರಿಂದ ಡಿ.31 ರವರೆಗಿನ ಬ್ಯಾಂಕ್ ವಹಿವಾಟಿನ ವಿವರಗಳನ್ನು ನೀಡುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ದುಬಾರಿ ಮುಖಬೆಲೆ ನೋಟುಗಳ ಮೇಲೆ ನಿಷೇಧ ಹೇರಿದ ದಿಂದಿಂದ ಹಿಡಿದು ಡಿಸೆಂಬರ್ 31ರವರೆಗಿನ ನಿಮ್ಮ ಬ್ಯಾಂಕ್ ವಹಿವಾಟಿನ ವಿವರಗಳನ್ನು ಸಲ್ಲಿಸಿ ಎಂದು ಬಿಜೆಪಿ ಎಲ್ಲಾ ಸಂಸದರು, ಶಾಸಕರಿಗೆ ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ನೋಟು ನಿಷೇಧ ಹೇರಿಕೆಯ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನವೇ ಕೆಲ ಬಿಜೆಪಿ ನಾಯಕರಿಗೆ ಈ ವಿಚಾರ ತಿಳಿದಿತ್ತು ಎಂದು ವಿರೋಧ ಪಕ್ಷಗಳು ಈ ಹಿಂದೆ ಆರೋಪ ವ್ಯಕ್ತಪಡಿಸಿದ್ದವು. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರು ವಿರೋಧ ಪಕ್ಷಗಳ ಬಾಯಿ ಮುಚ್ಚಿಸಲು ಈ ನಿರ್ಧಾರವನ್ನು ಕೈಗೊಂಡಿದ್ದು, ಪಕ್ಷದ ಎಲ್ಲಾ ಸಂಸದರು ಹಾಗೂ ಬಿಜೆಪಿ ಆಡಳಿದಲ್ಲಿರುವ ಎಲ್ಲಾ ರಾಜ್ಯಗಳ ಶಾಸಕರು ಸೇರಿದಂದೆ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರೂ ತಮ್ಮ ಬ್ಯಾಂಕ್ ವಹಿವಾಟಿನ ವಿವಗಳನ್ನು 2017 ಜನವರಿ 1ರ ಒಳಗಾಗಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ನೀಡಬೇಕೆಂದು ಆದೇಶಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com