ಗೋಲಘಾಟ್/ಜೋರಾಟ್: ಅಸ್ಸಾಂನ ಗೋಲಘಾಟ್ ಜಿಲ್ಲೆಯಲ್ಲಿ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಬಸ್ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು 20ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುವಾಹತಿಯಿಂದ ತಿನ್ಸುಕಿಯಾಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಎದುರುಗಡೆಯಿಂದ ಬರುತ್ತಿದ್ದ ತೈಲ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ ಎಂದು ದೆರ್ಗಾನ್ ಪೊಲೀಸ್ ಠಾಣೆಯ ಅಧಿಕಾರಿ ರೂಪಜ್ಯೋತಿ ದತ್ ಅವರು ಹೇಳಿದ್ದಾರೆ.
ಘಟನೆಯಲ್ಲಿ ಬಸ್ ಚಾಲಕ ಹಾಗೂ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ತೈಲ ಟ್ಯಾಂಕರ್ ನ ಇಬ್ಬರು ಸೇರಿದಂತೆ 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋಲಘಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದತ್ ತಿಳಿಸಿದ್ದಾರೆ.