ನಗ್ರೋಟಾ ದಾಳಿ: ಸೇನಾ ಮುಖ್ಯಸ್ಥರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ, ಪರಿಕ್ಕರ್

ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಮೇಲೆ ಉಗ್ರರು ನಡೆಸಿದ ಭೀಕರ ದಾಳಿ ಕುರಿತಂತೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಮೇಲೆ ಉಗ್ರರು ನಡೆಸಿದ ಭೀಕರ ದಾಳಿ ಕುರಿತಂತೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ವಿವರಣೆ ನೀಡಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಹಾಗೂ ಉರಿ ಸೇನಾ ನೆಲೆ ಮೇಲೆ ದಾಳಿ ನಡೆಸಿದ ಅಟ್ಟಹಾಸ ಮೆರೆದಿದ್ದ ಉಗ್ರರು ನಿನ್ನೆ ಮತ್ತೆ ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಮೇಲೆ ದಾಳಿ ನಡೆಸಿದ್ದರು. ಪೊಲೀಸರ ಸಮವಸ್ತ್ರ ಧರಿಸಿ ಬಂದಿದ್ದ ಉಗ್ರರು ನಗ್ರೋಟಾದಲ್ಲಿನ 16 ಕೋರ್ ಸೇನಾ ಶಿಬಿರದ ಮೇಲೆ ದಾಳಿನಡೆಸಿದ್ದರು. ದಾಳಿಯಲ್ಲಿ ಬೆಂಗಳೂರು ಮೂಲದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಸಹಿತ 7 ಮಂದಿ ಯೋಧರನ್ನು ಬಲಿಪಡೆದುಕೊಂಡಿದ್ದರು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಕ ಉಗ್ರರು ನಡೆದಿ ದೊಡ್ಡ ಮಟ್ಟ ದಾಳಿ ಇದಾಗಿದೆ. ದಾಳಿ ಕುರಿತಂತೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com