ಭಾರತದ ಶಾಂತಿಯುತ ನಡೆಯನ್ನು ತಡೆಯಲು ಉಗ್ರರಿಂದ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ನಡೆದ ಉಗ್ರರ ದಾಳಿ ಪ್ರಕರಣವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ತೀವ್ರವಾಗಿ ಖಂಡಿಸಿದ್ದಾರೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ನಡೆದ ಉಗ್ರರ ದಾಳಿ ಪ್ರಕರಣವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ತೀವ್ರವಾಗಿ ಖಂಡಿಸಿದ್ದಾರೆ.

ದಾಳಿ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಗ್ರೋಟಾ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಾರತದ ಶಾಂತಿಯುತ ನಡೆಯನ್ನು ತಡೆಯಲು ಉಗ್ರರಿಂದ ಸಾಧ್ಯವಿಲ್ಲ. ಯೋಧರ ಅಗಲಿಕೆ ಸಾಕಷ್ಟು ನೋವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಹಾಗೂ ಉರಿ ಸೇನಾ ನೆಲೆ ಮೇಲೆ ದಾಳಿ ನಡೆಸಿದ ಅಟ್ಟಹಾಸ ಮೆರೆದಿದ್ದ ಉಗ್ರರು ನಿನ್ನೆ ಮತ್ತೆ ಜಮ್ಮು ಮತ್ತು ಕಾಶ್ಮೀರದ ನಗ್ರೋಟಾ ಮೇಲೆ ದಾಳಿ ನಡೆಸಿದ್ದರು. ಪೊಲೀಸರ ಸಮವಸ್ತ್ರ ಧರಿಸಿ ಬಂದಿದ್ದ ಉಗ್ರರು ನಗ್ರೋಟಾದಲ್ಲಿನ 16 ಕೋರ್ ಸೇನಾ ಶಿಬಿರದ ಮೇಲೆ ದಾಳಿನಡೆಸಿದ್ದರು. ದಾಳಿಯಲ್ಲಿ ಬೆಂಗಳೂರು ಮೂಲದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಸಹಿತ 7 ಮಂದಿ ಯೋಧರನ್ನು ಬಲಿಪಡೆದುಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com