ರಾಹುಲ್ ಗಾಂಧಿ ಖಾತೆ ನಂತರ ಕಾಂಗ್ರೆಸ್ ಟ್ವೀಟ್ ಖಾತೆಯೂ ಹ್ಯಾಕ್, ಆಕ್ಷೇಪಾರ್ಹ ಪೋಸ್ಟ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬಳಸುತ್ತಿದ್ದ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿದ ಬೆನ್ನಲ್ಲೇ ಕಿಡಿಗೇಡಿಗಳು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯನ್ನೂ ಹ್ಯಾಕ್ ಮಾಡಿದ್ದಾರೆ.
ರಾಹುಲ್ ಗಾಂಧಿ ಖಾತೆ ನಂತರ ಕಾಂಗ್ರೆಸ್ ಟ್ವೀಟ್ ಖಾತೆಯೂ ಹ್ಯಾಕ್
ರಾಹುಲ್ ಗಾಂಧಿ ಖಾತೆ ನಂತರ ಕಾಂಗ್ರೆಸ್ ಟ್ವೀಟ್ ಖಾತೆಯೂ ಹ್ಯಾಕ್
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬಳಸುತ್ತಿದ್ದ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿದ ಬೆನ್ನಲ್ಲೇ ಕಿಡಿಗೇಡಿಗಳು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯನ್ನೂ ಹ್ಯಾಕ್ ಮಾಡಿದ್ದಾರೆ. 
ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಕೆಲವು ಟ್ವೀಟ್ ಗಳಲ್ಲಿ ರಾಹುಲ್ ಗಾಂಧಿ ಅವರಿಗೆ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಕುರಿತಾಗಿ ಅವಹೇಳನಕಾರಿ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಪಕ್ಷ ದೇಶವನ್ನು ಲೂಟಿ ಮಾಡಿದ ಪಕ್ಷ ಎಂದೂ ಟ್ವೀಟ್ ಮಾಡಿ ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯಲ್ಲಿ ಹ್ಯಾಕರ್ ಗಳು ಟ್ವೀಟ್ ಮಾಡಿದ್ದಾರೆ. 
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆಯನ್ನು 24 ಗಂಟೆಗಳ ಅವಧಿಯಲ್ಲಿ 2 ಬಾರಿ ಹ್ಯಾಕ್ ಮಾಡಲಾಗಿದೆ. ಈ ಬಗ್ಗೆ ದೂರು ದಾಖಲಿಸುವುದಾಗಿ ತಿಳಿಸಿದ್ದ ಕಾಂಗ್ರೆಸ್ ಪಕ್ಷದ ಟ್ವೀಟ್ ಖಾತೆಯೂ ಹ್ಯಾಕ್ ಆಗಿದೆ.    

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com