ವಿತ್ತ ಸಚಿವ ಅರುಣ್ ಜೇಟ್ಲಿ
ದೇಶ
ಸುಷ್ಮಾ ಅನಾರೋಗ್ಯ: ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಭಾರತೀಯ ನಿಯೋಗಕ್ಕೆ ಜೇಟ್ಲಿ ನೇತೃತ್ವ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಡಿ.4 ರಂದು ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುವ ಭಾರತೀಯ ನಿಯೋಗಕ್ಕೆ ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವ ವಹಿಸಲಿದ್ದಾರೆ.
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಡಿ.4 ರಂದು ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುವ ಭಾರತೀಯ ನಿಯೋಗಕ್ಕೆ ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವ ವಹಿಸಲಿದ್ದಾರೆ.
ಅನಾರೋಗ್ಯ ಎದುರಿಸುತ್ತಿರುವ ಸುಷ್ಮಾ ಸ್ವರಾಜ್ ಪಂಜಾಬ್ ನ ಅಮೃತ್ ಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ. ಡಿ.4 ರಂದು ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಪ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಜಂಟಿಯಾಗಿ ಉದ್ಘಾಟನೆ ಮಾಡಲಿದ್ದು, ರಷ್ಯಾ, ಚೀನಾ, ಅಮೆರಿಕ ಸೇರಿದಂತೆ 30ಕ್ಕೂ ಹೆಚ್ಚು ದೇಶದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಅರುಣ್ ಜೇಟ್ಲಿ ಅವರೊಂದಿಗೆ ಅಪ್ಘಾನಿಸ್ತಾನದ ವಿದೇಶಾಂಗ ಸಚಿವ, ಪಾಕಿಸ್ತಾನ ಅಪ್ಘಾನಿಸ್ತಾನ ಇರಾನ್ ವಿದೇಶಾಂಗ ವ್ಯವಹಾರಗಳನ್ನು ಗಮನಿಸುವ ಭಾರತೀಯ ಅಧಿಕಾರಿ ಗೋಪಾಲ್ ಬಾಗ್ಲೇ ಸಹ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ