ತ.ನಾಡಿಗೆ 'ನಾಡಾ' ಚಂಡಮಾರುತ ಭೀತಿ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಇದೀಗ 'ನಾಡಾ' ಚಂಡಮಾರುತ ಭೀತಿ ಎದುರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 2 ದಿನಗಳ ಕಾಲ ಶಾಲಾ, ಕಾಲೇಜುಗಳಿಗೆ ರಜೆಯನ್ನು ಘೋಷಣೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಇದೀಗ 'ನಾಡಾ' ಚಂಡಮಾರುತ ಭೀತಿ ಎದುರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 2 ದಿನಗಳ ಕಾಲ ಶಾಲಾ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ತಮಿಳುನಾಡಿನ ಕರಾವಳಿ ತೀರ ಪ್ರದೇಶದಲ್ಲಿ 'ನಾಡಾ' ಚಂಡಮಾರುತ ಹಾದು ಹೋಗಲಿದ್ದು, ಪರಿಣಾಮ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಂಡಮಾರುತಕ್ಕೆ ನಾಡಾ ಎಂದು ಹೆಸರಿಡಲಾಗಿದ್ದು, ಈ ಚಂಡಮಾರುತ ಪ್ರಸ್ತುತ ಚೆನ್ನೈನ ಆಗ್ನೇಯ ದಿಕ್ಕಿನಲ್ಲಿ 770 ಕಿ.ಮೀ ದೂರದಲ್ಲಿದೆ. ಇದು ಪಶ್ಚಿಮಾಭಿಮುಖವಾಗಿ ಸಾಗುತ್ತಾ ತೀಕ್ಷ್ಣಗೊಳ್ಳುವ ನಿರೀಕ್ಷೆಗಳಿವೆ. ತಮಿಳುನಾಡು, ಪಾಂಡಿಚೇರಿಯ ಕಡಲೂರು, ವೇದಾರಣ್ಯಂ ನಡುವೆ ಚಂಡಮಾರುತ ಹಾದುವ ಹೋಗುವ ಸಾಧ್ಯತೆಗಳಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇವೆ. ಈ ಹಿನ್ನೆಲೆಯಲ್ಲಿ ಕರಾವಳಿ ತೀರ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಕರಾವಳಿ ತೀರ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ(ಎನ್ ಡಿಆರ್ ಎಫ್) ಮುಕ್ಕಾಂ ಹೂಡಿದ್ದು, ಕಡಲ ತೀರ ಪ್ರದೇಶಗಳಿಗೆ ಮೀನುಗಾರರನ್ನು ಬಿಡದಂತೆ ನೋಡಿಕೊಳ್ಳುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com