
ಭೂಪಾಲ್: ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಮೋದಿಯವರ 56 ಇಂಚಿನ ಇದೆ ಇದೀಗ 100 ಇಂಚಿಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಎಂಎಸ್ಎಂಇ ಸಮಾವೇಶ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಅವರು, ಚೀನಾಗಿಂದಲೂ ನಮ್ಮ ದೇಶದ ಅಭಿವೃದ್ಧಿ ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಬೆಳವಣಿಗೆಯಲ್ಲಿ ಭಾರತದ ಶಕ್ತಿಯನ್ನು ಅರಿಯಬಹುದಾಗಿದೆ. ಸೀಮಿತಿ ದಾಳಿ ನಡೆಸಿ ಯಶಸ್ಸು ಕಂಡಿಸುವ ಭಾರತೀಯ ಸೇನೆಗೆ ಅಭಿನಂದಿಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೂ ಶುಭಾಶಯಗಳನ್ನು ಹೇಳಲು ಇಚ್ಛಿಸುತ್ತೇನೆ. ಮೋದಿಯವರ 56 ಇಂಚಿನ ಎದೆ ಇದೀಗ 100 ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಹೊಸ ಭಾರತವಾಗಿ ನಮ್ಮ ದೇಶ ಹೊರಹೊಮ್ಮುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ದೇಶದ ಅಭಿವೃದ್ಧಿಯಲ್ಲಿ ಮಧ್ಯಪ್ರದೇಶ ಕೂಡ ಉನ್ನತ ಪಾತ್ರವನ್ನು ನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.
Advertisement