
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಿಎಸ್ಎಫ್ ಯೋಧರ ಶಿಬಿರದ ಮೇಲೆ ಉಗ್ರರ ದಾಳಿ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸೋಮವಾರ ಉನ್ನತ ಮಟ್ಟದ ಸಭೆಯನ್ನು ಕರೆಸಿದ್ದಾರೆಂದು ತಿಳಿದುಬಂದಿದೆ.
ರಕ್ಷಣಾ ಸಚಿವರ ಕರೆದಿರುವ ಈ ಸಭೆಯಲ್ಲಿ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್, ವಾಯುಪಡೆ ಮುಖ್ಯಸ್ಥ ಏರ್ ಮಾರ್ಷನ್ ಅರುಪ್ ರಹಾ, ನೌಕಾದಳದ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲನ್ಬಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭಾಗಿಯಾಗಲಿದ್ದು, ಸಭೆಯಲ್ಲಿ ಮುಂದಿನ ನಿರ್ಧಾರಗಳ ಕುರಿತಂತೆ ಅಧಿಕಾರಿಗಳು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ದಾಳಿ ಹಿನ್ನೆಲೆಯಲ್ಲಿ ಈ ಹಿಂದೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಭದ್ರತೆ ಕುರಿತಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ಚರ್ಚೆ ನಡೆಸಿದ್ದರು. ಅಲ್ಲದೆ, ಭದ್ರತೆ ಕುರಿತು ವರದಿಯನ್ನು ಪಡೆದುಕೊಂಡಿದ್ದರು.
Advertisement