
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿ ಘಟನೆಗೆ ಸಂಬಂಧಿಸಿದಂತೆ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಭದ್ರತೆಯ ಕುರಿತಂತೆ ಹಾಗೂ ಪೂರ್ವ ಸಿದ್ಧತೆಗಳ ಕುರಿತಂತೆ ದೋವಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವರದಿ ಸಲ್ಲಿಸಿದ್ದು, ಮುಂದಿನ ಹೆಜ್ಜೆ ಹಾಗೂ ನಿರ್ಧಾರಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ದಾಳಿ ಕುರಿತಂತೆ ಮಾತನಾಡಿದ್ದು, ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂದು ನಮ್ಮ ಯೋಧರಿಗೆ ತಿಳಿದಿದೆ ಎಂದು ಹೇಳಿದ್ದಾರೆ.
ರಾಜನಾಥ್ ಸಿಂಗ್ ಅವರು ಮಾತನಾಡಿ, ನಮ್ಮ ಸೇನೆಯ ಮೇಲೆ ಸಂಪೂರ್ಣವಾಗಿ ನಂಬಿಕೆಯಿದ್ದು, ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಲಿದ್ದಾರೆಂದು ಹೇಳಿದ್ದಾರೆ.
Advertisement