ಜಯಲಲಿತಾ ಆರೋಗ್ಯದ ಬಗ್ಗೆ ಮಾಹಿತಿ ಕೋರಿ ಪಿಐಎಲ್ ಸಲ್ಲಿಕೆ

ಅನಾರೋಗ್ಯ ನಿಮಿತ್ತ ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಪೂರ್ಣ ಮಾಹಿತಿ ...
ಜಯಲಲಿತಾ
ಜಯಲಲಿತಾ

ಚೆನ್ನೈ: ಅನಾರೋಗ್ಯ ನಿಮಿತ್ತ ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಪೂರ್ಣ ಮಾಹಿತಿ ನೀಡಬೇಕು ಎಂದು ಕೋರಿ ಮದ್ರಾಸ್ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ.

ತಮಿಳುನಾಡು ಜನತೆ ಸಿಎಂ ಜಯಲಲಿತಾ ಆರೋಗ್ಯದ ಸ್ಥಿತಿ ಗತಿ ಬಗ್ಗೆ ತಿಳಿದುಕೊಳ್ಳಲು ಕಾತುರರಾಗಿದ್ದಾರೆ. ಹೀಗಾಗಿ ಅವರ ಆರೋಗ್ಯ ಸಂಬಂಧ ಮಾಹಿತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಆಸ್ಪತ್ರೆಯಲ್ಲಿ ಜಯಲಲಿತಾ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ಮೀಟಿಂಗ್ ನಡೆಸಿದ್ದರು ಎಂದು ಹೇಳಲಾಗಿದೆ. ಹೀಗಾಗಿ ಮೀಟಿಂಗ್ ನ ಫೋಟೋ ಕೂಡ ಬಿಡುಗಡೆ ಮಾಡುವಂತೆ ಕೋರಲಾಗಿದೆ.

ಜಯಲಲಿತಾ ದಾಖಲಾಗಿರುವ ಆಸ್ಪತ್ರೆ ಮುಂಭಾಗ ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಬ್ಲಾಕ್ ಮಾಡಲಾಗಿದೆ. ಇದರಿಂದಾಗಿ ಆಸ್ಪತ್ರೆಗೆ ತೆರಳುವ ಬೇರೆ ರೋಗಿಗಳಿಗೆ ತೊಂದರೆಯಾಗುತ್ತಿದೆ,  ಹಾಗಾಗಿ ಬ್ಯಾರಿಕೇಡ್ ಗಳನ್ನು ತೆರವುಗೊಳಿಸಬೇಕು ಎಂದು ಅವರು ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com