ಪಿಒಕೆಯಲ್ಲಿ ಸೀಮಿತ ದಾಳಿ: ಮನೋಹರ್ ಪರಿಕ್ಕರ್ ಗೆ ಸನ್ಮಾನ ಮಾಡುವುದಕ್ಕೆ ಕಾಂಗ್ರೆಸ್ ವಿರೋಧ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನಾ ಪಡೆ ನಡೆಸಿದ್ದ ಸೀಮಿತ ದಾಳಿ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೆ ಸನ್ಮಾನ ಮಾಡುತ್ತಿರುವ ಬಿಜೆಪಿ ಕ್ರಮವನ್ನು ಗೋವಾ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ಪಣಜಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನಾ ಪಡೆ ನಡೆಸಿದ್ದ ಸೀಮಿತ ದಾಳಿ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೆ ಸನ್ಮಾನ ಮಾಡುತ್ತಿರುವ ಬಿಜೆಪಿ ಕ್ರಮವನ್ನು ಗೋವಾ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ಸೇನಾಪಡೆ ಕಾರ್ಯಾಚರಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎಂದು ಗೋವಾ ಕಾಂಗ್ರೆಸ್ ಪಕ್ಷದ ವಕ್ತಾರ ಸುನಿಲ್ ಕಾವಾಥನ್ಕರ್ ಆರೋಪಿಸಿದ್ದಾರೆ. ಪಿಒಕೆಯಲ್ಲಿ ಸೀಮಿತ ದಾಳಿ ನಡೆಸಿರುವ ಭಾರತ ಸೇನೆಗೆ ಉತ್ತೇಜನ ನೀಡುವ ಅಗತ್ಯವಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಹೇಳಿದ್ದಾರೆ.

ಮನೋಹರ್ ಪರಿಕ್ಕರ್ ಒಂದು ವೇಳೆ ಸನ್ಮಾನವನ್ನು ಸ್ವೀಕರಿಸುವುದೇ ಆದರೆ, ಬಾರಾಮುಲ್ಲಾದಲ್ಲಿ ಉಗ್ರದಾಳಿ ನಡೆದ ಹಿನ್ನೆಲೆಯಲ್ಲಿ ಮನೋಹರ್ ಪರಿಕ್ಕರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಭಾರತೀಯ ಸೇನೆ ದಾಳಿ ನಡೆಸಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಶ್ಲಾಘಿಸಿದ್ದೇವೆ, ಆದರೆ ಬಿಜೆಪಿ ಸೇನಾ ದಾಳಿಯನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದೆ, ಬಾರಾಮುಲ್ಲಾದಲ್ಲಿ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿಯೇಕೆ ಮನೋಹರ್ ಪರಿಕ್ಕರ್ ಅವರ ರಾಜಿನಾಮೆಗೆ ಆಗ್ರಹಿಸುತ್ತಿಲ್ಲ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com