ರಾಹುಲ್ ರೋಡ್ ಶೋ ವೇಳೆ ಭಾಗಿ: 250 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು

ಅನುಮತಿ ನಿರಾಕರಿಸಿದ್ದರೂ ಕಾಂಗ್ರೆಸ್ ಉಪಾದ್ಯಕ್ಷ ರಾಹುಲ್ ಗಾಂಧಿಯವರ ರೋಡ್ ಶೋನಲ್ಲಿ ಭಾಗಿಯಾಗಿದ್ದ ಕಾರಣಕ್ಕೆ 250 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಮಂಗಳವಾರ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

ಮೊರಾದಾಬಾದ್: ಅನುಮತಿ ನಿರಾಕರಿಸಿದ್ದರೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ರೋಡ್ ಶೋನಲ್ಲಿ ಭಾಗಿಯಾಗಿದ್ದ ಕಾರಣಕ್ಕೆ 250 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ರೋಡ್ ಶೋನಲ್ಲಿ ಭಾಗಿಯಾಗುವುದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಮೊರಾದಾಬಾದ್ ಪೊಲೀಸರ ಅನುಮತಿ ಕೇಳಿದ್ದರು. ಇದಕ್ಕೆ ಪೊಲೀಸರು ನಿರಾಕರಿಸಿದ್ದರು. ಅನುಮತಿ ನಿರಾಕರಿಸಿದ್ದರೂ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಸ್ಥ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೆಕ್ಷನ್ 144 ಕಾಯ್ದೆಯನ್ನು ಉಲ್ಲಂಘಿಸಿದ್ದಾರೆಂದು ಹೇಳಿ ಅಧಿಕಾರಿಗಳು 250 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಎಸ್'ಪಿ ರಾಮ್ ಸುರೇಶ್ ಯಾದವ್ ಅವರು, ರೋಡ್ ಶೋ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ನಿಯೋಜಿಸಲಾಗಿತ್ತು.  ಈ ಭದ್ರತೆ ನಿಯೋಜಿಸಲು ಮಾಡಲಾದ ಖರ್ಚು ವೆಚ್ಚಗಳನ್ನು ಕಾಂಗ್ರೆಸ್ ನಾಯಕರಿಂದಲೇ ವಸೂಲಿ ಮಾಡಲಾಗುತ್ತದೆ ಎಂದು ಎಫ್ಐಆರ್ ನಲ್ಲಿ ದಾಖಲು ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com