ಉದ್ವಿಗ್ನ ವಾತಾವರಣ: ಪಂಜಾಬ್'ನಾದ್ಯಂತ ಹೆಚ್ಚಿದ ಭದ್ರತೆ

ಗುರುದಾಸ್ಪುರದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಂಜಾಬ್ ನಾದ್ಯಂತ ಭದ್ರತಾ ಹೆಚ್ಚಿಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಮಂಗಳವಾರ ಕೇಂದ್ರ ಸರ್ಕಾರಕ್ಕೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅಮೃತಸರ: ಗುರುದಾಸ್ಪುರದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಂಜಾಬ್ ನಾದ್ಯಂತ ಭದ್ರತಾ ಹೆಚ್ಚಿಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪಂಜಾಬ್ ನಾದ್ಯಂತ ಭದ್ರತೆಯನ್ನು ಹೆಚ್ಚಿಸಲು ಎಚ್ಚರಿಕೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗಳ ಕೊರತೆಯಿದೆ. ಹೀಗಾಗಿ ಮತ್ತಷ್ಟು ಭದ್ರತಾ ಸಿಬ್ಬಂದಿಗಳನ್ನು ಕಳುಹಿಸಿಕೊಡುವಂತೆ ಪಂಜಾಬ್ ಪೊಲೀಸರು ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಪಂಜಾಬ್ ನ ಗುರುದಾಸ್ಪುರದ ಚಕ್ರಿ ಪೋಸ್ಟ್ ಬಳಿ ಭಾರೀ ಮಟ್ಟದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈಗಲೂ ಗಡಿಯಲ್ಲಿ ಉದ್ನಿಗ್ನ ವಾತಾವರಣ ಮುಂದುವರೆದಿದ್ದು, ಪಂಜಾಬ್ ನಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com