ಜಯಲಲಿತಾ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ: ವೈದ್ಯರು

ತಮಿಳು ನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ...
ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ(ಸಂಗ್ರಹ ಚಿತ್ರ)
ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ(ಸಂಗ್ರಹ ಚಿತ್ರ)
Updated on: 
 ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ ಎಂದು ಅಪೊಲೋ ಆಸ್ಪತ್ರೆ ವರದಿ ಮಾಡಿದೆ. ಅಲ್ಲಿ ಅವರು ಸೆಪ್ಟೆಂಬರ್ 22ರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. 
ವೈದ್ಯರ ತಂಡದ ತೀವ್ರ ನಿಗಾದಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರಿದ್ದು, ಇನ್ನು ಕೆಲ ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ತೆಗೆದುಕೊಳ್ಳುವಂತೆ ಹೇಳಿದ್ದಾರೆ.
ನಿನ್ನೆ ಮದ್ರಾಸ್ ಹೈಕೋರ್ಟ್, ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಪರಿಸ್ಥಿತಿ ಕುರಿತು ಎರಡು ದಿನಗಳೊಳಗಾಗಿ ತಿಳಿಸಿ ಎಂದು ತಮಿಳು ನಾಡು ಸರ್ಕಾರಕ್ಕೆ ಸೂಚಿಸಿತ್ತು. ಈ ರಾಜ್ಯದ ಜನತೆಗೆ ಮುಖ್ಯಮಂತ್ರಿಯವರ ಆರೋಗ್ಯ ಪರಿಸ್ಥಿತಿ ಕುರಿತು ತಿಳಿದುಕೊಳ್ಳುವ ಹಕ್ಕು ಇದೆ ಎಂದು ಹೇಳಿದ ಹೈಕೋರ್ಟ್ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗೆ ಸೂಚನೆ ನೀಡಿ ಸರ್ಕಾರದ ಅಧಿಕಾರಿಗಳಿಂದ ನಾಳೆಯೊಳಗೆ ಮಾಹಿತಿ ಪಡೆಯುವಂತೆ ಸೂಚಿಸಿತ್ತು. ಆಸ್ಪತ್ರೆ ಅಧಿಕಾರಿಗಳು ಕೆಲವೊಂದು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದರೂ ಕೂಡ ರಾಜ್ಯ ಸರ್ಕಾರಕ್ಕೆ ಮುಖ್ಯಮಂತ್ರಿಯವರ ಆರೋಗ್ಯ ಪರಿಸ್ಥಿತಿ ಕುರಿತು ವರದಿ ನೀಡುವ ಜವಾಬ್ದಾರಿಯಿದೆ ಎಂದು ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com