

ನವದೆಹಲಿ: ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತಿ ನಡೆಸಿದ ನಂತರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆಂದು ಬುಧವಾರ ತಿಳಿದುಬಂದಿದೆ.
ರಾಜಧಾನಿ ದೆಹಲಿಯಲ್ಲಿರುವ ಪ್ರಧಾನಮಂತ್ರಿ ಕಚೇರಿಯಲ್ಲಿ ಸಚಿವ ಸಂಪುಟದ ಭದ್ರತಾ ಸಮಿತಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಭೆ ನಡೆಸುತ್ತಿದ್ದು, ಭದ್ರತೆ ಕುರಿತಂತೆ ರಾಜನಾಥ್ ಸಿಂಗ್ ಅವರು ವರದಿ ನೀಡಿದ್ದಾರೆಂದು ಹೇಳಲಾಗುತ್ತಿದೆ.
ಸಭೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಪ್ರಧಾನಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹಾಜರಿದ್ದಾರೆ.