ಸೀಮಿತ ದಾಳಿಯ ಸಾಕ್ಷ್ಯ ಕೊಡಬೇಕಾಗಿಲ್ಲ, ಸೇನಾ ಪ್ರತಿಕಾರದ ಬಗ್ಗೆ ಹೆಮ್ಮೆ ಇದೆ: ಪರಿಕ್ಕರ್

ಕಳೆದ ಸೆ.29ರಂದು ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಪ್ರದೇಶದಲ್ಲಿ ನಡೆಸಿದ ಸೀಮಿತ ದಾಳಿಯ ಬಗ್ಗೆ ಸಾಕ್ಷ್ಯ ನೀಡುವ ಯಾವುದೇ ಉದ್ದೇಶ...
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
ಆಗ್ರ: ಕಳೆದ ಸೆ.29ರಂದು ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಪ್ರದೇಶದಲ್ಲಿ ನಡೆಸಿದ ಸೀಮಿತ ದಾಳಿಯ ಬಗ್ಗೆ ಸಾಕ್ಷ್ಯ ನೀಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಕ್ಕರ್, ಭಾರತೀಯ ಸೇನಾ ಪಡೆಗಳ ದೇಶಭಕ್ತಿಯ ಬಗ್ಗೆ ಅನುಮಾನ ಪಡುವುದು ಬೇಡ. ಉರಿ ಉಗ್ರ ದಾಳಿಗೆ ಪ್ರತಿಕಾರವಾಗಿ ಸೇನೆ ಸೀಮಿತ ದಾಳಿ ನಡೆಸಿದ್ದು, ಈ ಬಗ್ಗೆ ನಮಗೆ ಹೆಮ್ಮೆ ಇದೆ ಎಂದಿದ್ದಾರೆ.
ಇದೇ ವೇಳೆ ನೇರವಾಗಿ ಯಾರ ಹೆಸರನ್ನು ಪ್ರಸ್ತಾಪಿಸದೆ, ಹಲವು ಜನ ಸೀಮಿತ ದಾಳಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಸ್ವತಃ ಪಾಕಿಸ್ತಾನ ಪೊಲೀಸ್ ಅಧಿಕಾರಿಯೊಬ್ಬರು ಸೀಮಿತ ದಾಳೆ ನಡೆದಿದೆ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಆ ಬಗ್ಗೆ ಯಾವುದೇ ಸಾಕ್ಷ್ಯ ನೀಡುವ ಅಗತ್ಯ ಇಲ್ಲ ಎಂದರು,
'ಕೆಲವು ನಿವೃತ್ತ ಯೋಧರು ಅಗತ್ಯ ಬಿದ್ದರೆ ನಾವು ಈಗಲೂ ಗಡಿಯಲ್ಲಿ ಹೋರಾಡಲು ಸಿದ್ಧ ಎಂದು ನನಗೆ ಪತ್ರ ಬರೆದಿದ್ದಾರೆ. ಅವರಿಗೆ ನಾನು ಸೆಲ್ಯೂಟ್ ಮಾಡುತ್ತೇನೆ' ಎಂದು ರಕ್ಷಣಾ ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com