ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಿನ ವಾಕ್ಸರ ಮುಂದುವರೆದಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಭಾರತೀಯ ಸೇನೆಯನ್ನು ಅವಮಾನಿಸಿದ್ದು, ಈ ಕೂಡಲೇ ಅವರು ಸೇನೆ ಹಾಗೂ ಜನತೆಯ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಶುಕ್ರವಾರ ಆಗ್ರಹಿಸಿದೆ.