2018 ರೊಳಗೆ ಭಾರತ-ಪಾಕ್ ಗಡಿ ಸಂಪೂರ್ಣ ಬಂದ್: ರಾಜನಾಥ್ ಸಿಂಗ್

ಭಾರತ- ಪಾಕಿಸ್ತಾನದ ಗಾಡಿಯನ್ನು 2018 ರೊಳಗೆ ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ಭಾರತ- ಪಾಕಿಸ್ತಾನದ ಗಾಡಿಯನ್ನು 2018 ರೊಳಗೆ ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಭಯೋತ್ಪಾದಕ ದಾಳಿ ಹಾಗೂ ಅದಕ್ಕೆ ಪ್ರತ್ಯುತ್ತರವಾಗಿ ಸೇನೆ ನಡೆಸಿದ ಸೀಮಿತ ದಾಳಿ ಹಿನ್ನೆಲೆಯಲ್ಲಿ ಗಡಿಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜನಾಥ್ ಸಿಂಗ್, ಡಿಸೇಂಬರ್ 2018 ರ ವೇಳೆಗೆ ಭಾರತ- ಪಾಕ್ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಹೇಳಿದ್ದಾರೆ.

ಗಡಿ ರಾಜ್ಯಗಳಿಂದ ಮಾಹಿತಿ ಪಡೆದ ನಂತರ ಗಡಿ ಭದ್ರತಾ ಗ್ರಿಡ್ ನ್ನು ಬಳಸಿ ಭಾರತ- ಪಾಕ್ ಗಡಿಯನ್ನು ಮುಚ್ಚಲಾಗುವುದು ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.  ಪಾಕಿಸ್ತಾನದೊಂದಿಗೆ ಭಾರತ ಹೊಂದಿರುವ 3,323 ಕಿಮೀ ಗಡಿ ಪ್ರದೇಶದ ಭದ್ರತೆಗೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಬೇಕೆಂಬ ಸಮಿತಿಯೊಂದರ ಸಲಹೆಗೆ ಭಾರತ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.

ಪಠಾಣ್ ಕೋಟ್ ವಾಯು ನೆಲೆ ಮೇಲೆ ಭಯೋತ್ಪಾದಕರ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಮಧುಕರ್ ಗುಪ್ತಾ ಅವರ ನೇತೃತ್ವದ ಸಮಿತಿ ರಚಿಸಿ, ಗಡಿಪ್ರದೇಶದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಕೈಗೊಳ್ಳಬೇಕಿರುವ ಕ್ರಮಗಳಿಗೆ ಸಲಹೆ ನೀಡಲು ಸೂಚಿಸಿತ್ತು. ಈಗ ಮಧುಕರ್ ಗುಪ್ತ ನೇತೃತ್ವದ ಸಮಿತಿ ಕೇಂದ್ರ ಸರ್ಕಾರಕ್ಕೆ ಒಂದಷ್ಟು ಶಿಫಾರಸುಗಳನ್ನು ನೀಡಿದ್ದು, ಇವುಗಳಿಗೆ ಸರ್ಕಾರ ತಾತ್ವಿಕ ಅನುಮೋದನೆಯನ್ನೂ ನೀಡಿದೆ. ಈಗ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದ ಬಳಿಕ ಭಾರತ ಸರ್ಕಾರ ಪಾಕ್ ನೊಂದಿಗಿನ ಗಡಿಯನ್ನು ಸಂಪೂರ್ಣ ಮುಚ್ಚಲು ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com