ಪ್ರವಾಸಿ ತಾಣಗಳ ಮೇಲೆ ಉಗ್ರರ ಕೆಂಗಣ್ಣು: ಹೆಚ್ಚಿದ ಭದ್ರತೆ

ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರರು ಇದೀಗ ಭಾರತದಲ್ಲಿರುವ ಪ್ರವಾಸಿ ತಾಣಗಳನ್ನು ಗುರಿಯಾಗಿಸಿಟ್ಟುಕೊಂಡು ವಿಧ್ವಂಸಕ ಕೃತ್ಯವೆಸಗಲು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಲಖನೌ: ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರರು ಇದೀಗ ಭಾರತದಲ್ಲಿರುವ ಪ್ರವಾಸಿ ತಾಣಗಳನ್ನು ಗುರಿಯಾಗಿಸಿಟ್ಟುಕೊಂಡು ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಭಾನುವಾರ ಮಾಹಿತಿ ನೀಡಿದೆ.

ದೇಶದಾದ್ಯಂತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ದಸರಾ ಹಾಗೂ ವಿಜಯದಶಮಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರಂತೆ ದೇಶದಲ್ಲಿ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ಜನನಿಬಿಡ ಪ್ರದೇಶ ಹಾಗೂ ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂದು ಹೇಳಲಾಗುತ್ತಿದೆ.

ಗುಪ್ತಚರ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಪ್ರವಾಸಿ ತಾಣಗಳ ಮೇಲೆ ನಿಗಾ ಇರಿಸಲಾಗಿದ್ದು, ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಖನೌ, ಮೊರಾದಬಾದ್, ಬರೇಲಿ, ಮೀರುತ್, ವಾರಣಾಸಿ, ಮುಜಾಫರ್ನಗರ, ಅಲಹಾಬಾದ್ ಸೇರಿದಂತೆ ಇನ್ನಿತರೆ ಪ್ರದೇಶಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಪ್ರೀತಿ ಸಂಕೇತ ಆಗ್ರದ ತಾಜ್ ಮಹಲ್ ಮೇಲೂ ಉಗ್ರರು ಕೆಂಗಣ್ಣು ಬೀರಿದ್ದು, ಈಗಾಗಲೇ 36ಕ್ಕೂ ಹೆಚ್ಚು ಕಮಾಂಡೋಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರವೇಶ ದ್ವಾರದಿಂದ ಪ್ರತೀಯೊಂದು ಭಾಗದಲ್ಲೂ ಸಿಐಎಸ್ಎಫ್ ಸಿಬ್ಬಂದಿಗಳು ಭದ್ರತಾ ಕಾರ್ಯನಿರ್ವಹಿಸುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com