ಭಾರತವನ್ನು ಹಿಂದೂ ರಾಷ್ಟ್ರವಾಗಿಸಲು ಬಿಜೆಪಿ ಯತ್ನಿಸುತ್ತಿದೆ: ಮಾಯಾವತಿ

ಭಾರತವನ್ನು ಹಿಂದೂ ರಾಷ್ಟವಾಗಿಸಲು ಬಿಜೆಪಿ ಯತ್ನಿಸುತ್ತಿದ್ದು, ಉತ್ತರ ಪ್ರದೇಶದಲ್ಲಿ ಕೋಮುವಾದ ರಾಜಕೀಯವನ್ನು ಮಾಡುತ್ತಿದೆ ಎಂದು ಬಹುಜನ ಸಮಾಜ (ಬಿಎಸ್'ಪಿ) ಪಕ್ಷದ ಮುಖ್ಯಸ್ಥೆ...
ಬಹುಜನ ಸಮಾಜ (ಬಿಎಸ್'ಪಿ) ಪಕ್ಷದ ಮುಖ್ಯಸ್ಥೆ ಮಾಯಾವತಿ (ಸಂಗ್ರಹ ಚಿತ್ರ)
ಬಹುಜನ ಸಮಾಜ (ಬಿಎಸ್'ಪಿ) ಪಕ್ಷದ ಮುಖ್ಯಸ್ಥೆ ಮಾಯಾವತಿ (ಸಂಗ್ರಹ ಚಿತ್ರ)
Updated on

ಲಖನೌ: ಭಾರತವನ್ನು ಹಿಂದೂ ರಾಷ್ಟವಾಗಿಸಲು ಬಿಜೆಪಿ ಯತ್ನಿಸುತ್ತಿದ್ದು, ಉತ್ತರ ಪ್ರದೇಶದಲ್ಲಿ ಕೋಮುವಾದ ರಾಜಕೀಯವನ್ನು ಮಾಡುತ್ತಿದೆ ಎಂದು ಬಹುಜನ ಸಮಾಜ (ಬಿಎಸ್'ಪಿ) ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಭಾನುವಾರ ಆರೋಪಿಸಿದ್ದಾರೆ.

ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ದಿವಂಗತ ಕಾನ್ಷಿ ರಾಮ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಲಖನೌನಲ್ಲಿ ಆಯೋಜಿಸಲಾಗಿರುವ ಬೃಹತ್ ರ್ಯಾಲಿಯಲ್ಲಿ ಮಾನತಾಡಿರುವ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತವನ್ನು ಹಿಂದೂ ರಾಷ್ಟ್ರವಾಗಿಸಲು ಬಿಜೆಪಿ ಸತತ ಯತ್ನವನ್ನು ನಡೆಸುತ್ತಿದ್ದು, ಇದಕ್ಕಾಗಿ ಉತ್ತರ ಪ್ರದೇಶದಲ್ಲಿ ಕೋಮುವಾದಿ ರಾಜಕೀಯವನ್ನು ಮಾಡುತ್ತಿದೆ. ಗೋರಕ್ಷಕರು ಮುಸ್ಲಿಮರು ಹಾಗೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದ್ದು, ಪರಿಣಾಮ ದಲಿತರ ವಿರುದ್ಧ ದೌರ್ಜನ್ಯಗಳು ಹೆಚ್ಚಾಗುತ್ತಿದೆ.

ಗೋಮಾಂಸ ಇಟ್ಟುಕೊಂಡಿದ್ದಾರೆಂದು ಆರೋಪಿಸಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಯಿತು. ರಾಜ್ಯದಲ್ಲಿ ಕೋಮುವಾದಿ ರಾಜಕೀಯವನ್ನು ಮಾಡಲಾಗುತ್ತಿದ್ದು, ಮುಜಾಫರ್ನಗರದಲ್ಲಿ ನಡೆದ ಗಲಭೆ ಹಾಗೂ ದಾದ್ರಿ ಪ್ರಕರಣಗಳು ಇದಕ್ಕೆ ಉದಾಹರಣೆಯಾಗಿವೆ ಎಂದು ಹೇಳಿದ್ದಾರೆ. ಅಲ್ಲದೆ, ಖಾಸಗಿ ಉದ್ಯೋಗ ಕ್ಷೇತದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕೇಂದ್ರ ಮೀಸಲಾತಿಯನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿರುವ ಅವರು, ಮೋದಿಯವರು 2014ರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದಾಗ ಸಾಕಷ್ಟು ಭರವಸೆಗಳನ್ನು ನೀಡಿದ್ದರು. ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ಹಣದುಬ್ಬರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿದ್ದರು, ಅಲ್ಲದೆ, ಶಿಕ್ಷಣ, ಉದ್ಯೋಗಾವಕಾಶ ಮತ್ತು ವಿದ್ಯುತ್ ಮತ್ತು ನೀರು ನೀಡುವುದಾಗಿ ಹೇಳಿದ್ದರು. ಆದರೆ, ಅಧಿಕಾರಕ್ಕೆ ಬಂದು ಸಾಕಷ್ಟು ವರ್ಷಗಳೇ ಕಳೆದರೂ ಈ ವರೆಗೂ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಮೇಲೂ ವಾಗ್ದಾಳಿ ನಡೆಸಿರುವ ಅವರು, ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಇಲ್ಲಿನ ಸರ್ಕಾರ ವಿಫಲವಾಗಿದೆ. ಗೂಂಡಾರಾಜರಿಗೆ ರಾಜ್ಯದಲ್ಲಿ ಹೆಚ್ಚು ಗೌರವ ನೀಡಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗಾಗಿ ಜನರು ಬಿಎಸ್ ಪಿ ಪಕ್ಷಕ್ಕೆ ಮತಹಾಕಬೇಕಿದೆ. ಮುಂದಿನ ಚುನಾವಣೆಯಲ್ಲಿ ಬಿಎಸ್ ಪಿ ಅಧಿಕಾರಕ್ಕೆ ಬರುವ ಎಲ್ಲಾ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com