

ಚೆನ್ನೈ: ತಮಿಳುನಾಡು ವಿರೋಧ ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ ಅವರು ಶನಿವಾರ ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ವಿಚಾರಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸ್ಟಾಲಿನ್ ಅವರು ಜಯಲಲಿತಾ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹಣಕಾಸು ಸಚಿವ ಓ.ಪನೀರ್‌ಸೆಲ್ವಂ ಮತ್ತು ಆರೋಗ್ಯ ಸಚಿವ ವಿಜಯ ಭಾಸ್ಕರ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಸ್ಟಾಲಿನ್ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಜಯಲಲಿತಾ ಅವರು ಬೇಗ ಗುಣಮುಖರಾಗಲೆಂದು ಕರುಣಾನಿಧಿ ಅವರು ಈಗಾಗಲೇ ಹಾರೈಸಿದ್ದಾರೆ. ಜಯಲಲಿತಾ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ನಾನು ಆಸ್ಪತ್ರೆಗೆ ಬಂದೆ. ಸಚಿವರಾದ ಓ. ಪನೀರ್‌ಸೆಲ್ವಂ ಮತ್ತು ವಿಜಯ ಭಾಸ್ಕರ್ ಅವರನ್ನು ಭೇಟಿಯಾಗಿ ಮಾತನಾಡಿದೆ. ಜಯಲಲಿತಾ ಆರೋಗ್ಯ ಸುಧಾರಿಸುತ್ತಿದೆ ಎಂದು ಅವರು ಹೇಳಿದ್ದಾರೆ.