ಲಖನೌ: ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ನಡೆಸುತ್ತಿದ್ದ ಬೃಹತ್ ಸಮಾವೇಶದಲ್ಲಿ ಕಾಲ್ತುಳಿತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ ಪುಣ್ಯ ತಿಥಿ ಅಂಗವಾಗಿ ಸ್ಮಾರಕ ಸ್ಥಳದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮುಖ್ಯ ದ್ವಾರದಲ್ಲಿ ನೂಕು ನುಗ್ಗಲು ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.
ಬೃಹತ್ ರ್ಯಾಲಿ ವೇಳೆ 5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.