ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ: ತನಿಖಾ ವರದಿ ಸಾರ್ವಜನಿಕವಾಗಿ ಬಹಿರಂಗಕ್ಕೆಕೇಂದ್ರ ನಕಾರ

ಹೈದರಾಬಾದ್ ವಿಶ್ವ ವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ನೀಡಿರುವ ತನಿಖಾ ...
ರೋಹಿತ್ ವೇಮುಲ
ರೋಹಿತ್ ವೇಮುಲ

ನವದೆಹಲಿ: ಹೈದರಾಬಾದ್ ವಿಶ್ವ ವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಮಿತಿ ನೀಡಿರುವ ತನಿಖಾ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಿಸಲು ಕೇಂದ್ರ ನಿರಾಕರಿಸಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ತನಿಖಾ ವರದಿಯ ನಕಲು ಪ್ರತಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ವರದಿ ಸಲ್ಲಿಕೆ ಹಂತದಲ್ಲಿದೆ, ಹೀಗಾಗಿ ಯಾವುದೇ ಕಾರಣಕ್ಕೂ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ತಿಳಿಸಿದೆ.

ನಿವೃತ್ತ ನ್ಯಾಯಮೂರ್ತಿ ಅಶೋಕ್ ಕುಮಾರ್ ರೂಪನ್ ವಾಲ್ ನೇತೃತ್ವದಲ್ಲಿ ಫೆಬ್ರವರಿಯಲ್ಲಿ  ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಮಿತಿಯನ್ನು ನೇಮಕ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com