ಕೂಡಲೋರ್: ಜಿಲ್ಲೆಯ ಕುಚಿಪಾಲ್ಯಂ ಗ್ರಾಮದ ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದ ಹಳೆಯ ಮತ್ತು ಹರಿದ ನೋಟುಗಳು ಪತ್ತೆಯಾಗಿವೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಬಂದ ಮೂವರು ವ್ಯಕ್ತಿಗಳು ನಾಲ್ಕು ದೊಡ್ಡ ಬ್ಯಾಗ್ ಗಳಲ್ಲಿ ಕೋಟ್ಯಾಂತರ ರುಪಾಯಿ ಹಳೆಯ ಮತ್ತು ಹರಿದ ನೋಟುಗಳನ್ನು ರಸ್ತೆ ಬದಿ ಎಸೆದು ಹೋಗಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ನಾಲ್ಕು ಬ್ಯಾಗ್ ಗಳಲ್ಲಿದ್ದ ನೋಟುಗಳನ್ನು ಜಪ್ತಿ ಮಾಡಿರುವುದಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೇಧಾರ್ಥಿನಮ್ ಅವರು ಹೇಳಿದ್ದಾರೆ.
ಬ್ಯಾಂಕ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ನೋಟುಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.