

ನವದೆಹಲಿ: ತ್ರಿವಳಿ ತಲಾಕ್ ವಿಚಾರದಲ್ಲಿ ತನ್ನ ನಿಲುವನ್ನು ಪರಾಮರ್ಶಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ತಲಾಕ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ನೀಡಲಾಗಿರುವ ಅಭಿಪ್ರಾಯವನ್ನು ಪುನಃ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದು, ಅನೇಕ ಇಸ್ಲಾಮಿಕ್ ರಾಷ್ಟ್ರಗಳು ತ್ರಿವಳಿ ತಲಾಕ್ ಗೆ ಮಾನ್ಯತೆಯನ್ನು ರದ್ದುಗೊಳಿಸಿರುವ ಉದಾಹರಣೆಗಳಿವೆ ಎಂದು ಹೇಳಿದ್ದಾರೆ.
ತ್ರಿವಳಿ ತಲಾಕ್ ಷರಿಯಾ ಕಾನೂನನ್ನು ಉಲ್ಲಂಘಿಸುತ್ತದೆ ಎಂದು ಇಸ್ಲಾಮಿಕ್ ರಾಷ್ಟ್ರಗಳು ತ್ರಿವಳಿ ತಲಾಕ್ ನ್ನು ರದ್ದುಗೊಳಿಸಿರುವಾಗ, ಜಾತ್ಯಾತೀತ ರಾಷ್ಟ್ರವಾಗಿರುವ ಭಾರತ ತ್ರಿವಳಿ ತಲಾಕ್ ಪರವಾದ ನಿಲುವು ತಳೆಯಲು ಹೇಗೆ ಸಾಧ್ಯ, ಬಾಂಗ್ಲಾದೇಶ, ಪಾಕಿಸ್ತಾನ, ಇರಾನ್, ಟರ್ಕಿ, ಈಜಿಪ್ಟ್ ಗಳಲ್ಲಿ ತ್ರಿವಳಿ ತಲಾಕ್ ನ್ನು ರದ್ದುಗೊಳಿಸಬಹುದಾದರೆ ಭಾರತದಲ್ಲಿ ಏಕೆ ಸಾಧ್ಯವಿಲ್ಲ? ಎಂದು ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.