ಸೇನೆಯ ಮಾಹಿತಿ ಕಲೆಹಾಕುತ್ತಿದ್ದ 2 ಶಂಕಿತ ಐಎಸ್ಐ ಏಜೆಂಟರ ಬಂಧನ

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು...
ಐಎಸ್ಐ
ಐಎಸ್ಐ
Updated on: 

ಅಹಮದಾಬಾದ್: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಪಾಕಿಸ್ತಾನದ ಗಡಿಗೆ ಹೊಂದಿಕೊಂಡಿರುವ ಗುಜರಾತ್ ನ ಕಚ್ಛ್ ಜಿಲ್ಲೆಯಲ್ಲಿ ಕುಕಮಾ ಗ್ರಾಮದ ಮೊಹಮ್ಮದ್ ಅಲನ್ ಮತ್ತು ಸಫುರ್ ಸುಮರಾ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರು ಐಎಸ್ಐ ಪರ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ಎಟಿಎಸ್ ಗೆ ಸಂದೇಹವಿದ್ದು, ಕಳೆದ ಒಂದು ವರ್ಷದಿಂದ ಇವರ ಮೇಲೆ ಎಟಿಎಸ್ ಕಣ್ಣಿಟ್ಟಿತ್ತು. ಬಂಧಿತರಿಂದ ಪಾಕಿಸ್ತಾನ ಸಿಮ್ ಕಾರ್ಡ್ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದ್ದು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com