ಸಮಾನ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸುವುದಾಗಿ ಹೇಳಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಸಮಾನ ನಾಗರಿಕ ಸಂಹಿತೆ ಕುರಿತಂತೆ ಕೇಂದ್ರ ಕಾನೂನು ಆಯೋಗದ ಪ್ರಶ್ನೆಗಳನ್ನು ತಿರಸ್ಕರಿಸಿದ್ದು, ಏಕರೂಪ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.
ಸಮಾನ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸುವುದಾಗಿ ಹೇಳಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ನವದೆಹಲಿ: ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಸಮಾನ ನಾಗರಿಕ ಸಂಹಿತೆ ಕುರಿತಂತೆ ಕೇಂದ್ರ ಕಾನೂನು ಆಯೋಗದ ಪ್ರಶ್ನೆಗಳನ್ನು ತಿರಸ್ಕರಿಸಿದ್ದು, ಏಕರೂಪ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.
ತ್ರಿವಳಿ ತಲಾಕ್,  ನಿಕಾಹ್ ಹಲಾಲ್,  ಬಹುಪತ್ನಿತ್ವ ಇಸ್ಲಾಮ್ ನ ಆಚರಣೆಯ ಅವಿಭಾಜ್ಯ ಅಂಗಗಳಲ್ಲ ಅಥವಾ ಅದನ್ನು ಪಾಲಿಸಲೇಬೇಕಾದ ಅನಿವಾರ್ಯ ಕಾನೂನುಗಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದ ಬೆನ್ನಲ್ಲೇ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಏಕರೂಪ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ. ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಐಎಂಪಿಎಲ್ ಬಿ ಪ್ರಧಾನ ಕಾರ್ಯದರ್ಶಿ ಮೌಲಾನಾ ವಾಲಿ ರೆಹ್ಮಾನಿ, ಏಕರೂಪ ನಾಗರಿಕ ಸಂಹಿತೆ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಂವಿಧಾನದಲ್ಲಿ ನಿರ್ದಿಷ್ಟ ಸಂಸ್ಕೃತಿ ಹಾಗು ಧರ್ಮದ ಆಚರಣೆಗೆ ಅವಕಾಶವಿದ್ದು , ಏಕರೂಪ ನಾಗರಿಕ ಸಂಹಿತೆ ಸಮಾಜವನ್ನು ಒಡೆಯಲಿದೆ ಎಂದು ಮೌಲಾನಾ ವಾಲಿ ರೆಹ್ಮಾನಿ ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com