ಕಾಶ್ಮೀರದಲ್ಲಿ ಉಗ್ರರ ದಾಳಿ: ನಾಲ್ವರು ಯೋಧರಿಗೆ ಗಾಯ

ಜಮ್ಮು-ಕಾಶ್ಮೀರದ ಶ್ರೀನಗರ ಹೊರವಲಯದ ಝಕುರಾದಲ್ಲಿ ಉಗ್ರಗಾಮಿಗಳು ಏಕಾಏಕಿ ಗುಂಡಿನ ದಾಳಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರ ಹೊರವಲಯದ ಝಕುರಾದಲ್ಲಿ ಉಗ್ರಗಾಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು ಸಶಸ್ತ್ರ ಸೀಮಾ ಬಲದ ನಾಲ್ವರು ಜವಾನರು  ಗಾಯಗೊಂಡಿದ್ದಾರೆ. 
ಬಂದೂಕುಧಾರಿ ತಪ್ಪಿಸಿಕೊಂಡಿದ್ದು, ಇದೀಗ ಆ ಪ್ರದೇಶವನ್ನು ಸುತ್ತುವರಿಯಲಾಗಿದೆ. ಅರೆ ಸೇನಾಪಡೆಯ ಯೋಧರು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 29ರಂದು ಭಾರತವು ಪಾಕ್ ಆಕ್ರಮಿತ ಗಡಿ ನಿಯಂತ್ರಣ ರೇಖೆ ಬಳಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಪಾಕಿಸ್ತಾನಿ ಭಯೋತ್ಪಾದಕರಿಂದ ಹಲವು ಬಾರಿ ದಾಳಿ ಎದುರಿಸಿದ್ದಾರೆ. ಈ ವಾರದ ಆರಂಭದಲ್ಲಿ ಲಷ್ಕರ್-ಎ-ತೊಯ್ಬಾದ ಉಗ್ರಗಾಮಿಗಳು ಪಾಂಪೊರ್ ನಲ್ಲಿ ಸರ್ಕಾರಿ ಕಟ್ಟಡದ ಮೇಲೆ ದಾಳಿ ನಡೆಸಿ ಅದರ ಇಬ್ಬರು ಸದಸ್ಯರು ಮೃತರಾಗಿದ್ದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com