ಮಧ್ಯಪ್ರದೇಶ: ಕಂದಕಕ್ಕೆ ಬಸ್ ಬಿದ್ದು 8 ಮಂದಿ ಸಾವು!

ಸುಮಾರು 40 ಜನರು ಪ್ರಯಾಣಿಸುತ್ತಿದ್ದ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಕಂದಕಕ್ಕೆ ಉರುಳಿದ ಖಾಸಗಿ ಬಸ್ (ಎಎನ್ ಐ ಚಿತ್ರ)
ಕಂದಕಕ್ಕೆ ಉರುಳಿದ ಖಾಸಗಿ ಬಸ್ (ಎಎನ್ ಐ ಚಿತ್ರ)
Updated on: 

ಭೋಪಾಲ್: ಸುಮಾರು 40 ಜನರು ಪ್ರಯಾಣಿಸುತ್ತಿದ್ದ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯ  ಪ್ರದೇಶದಲ್ಲಿ ನಡೆದಿದೆ.

ಮೂಲಗಳ ಪ್ರಕಾರ ಮಧ್ಯ ಪ್ರದೇಶದ ರತ್ಲಮ್ ನಗರದಿಂದ ಮಂಡ್ಸೌರ್ ಗೆ ಪ್ರಯಾಣಿಸುತ್ತಿದ್ದ ಬಸ್ ಮಾರ್ಗ ಮಧ್ಯೆ ಕಂದಕಕ್ಕೆ ಉರುಳಿದೆ. ಬೆಳಗ್ಗೆ ಸುಮಾರು 10.30ರ ಸುಮಾರಿನಲ್ಲಿ ಈ ಘಟನೆ  ನಡೆದಿದ್ದು, ಕೂಡಲೇ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಈ  ವರೆಗೂ 8 ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ.

ಪ್ರತ್ಯಕ್ಷ ದರ್ಶಿಗಳು ತಿಳಿಸಿರುವಂತೆ ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಅತಿಯಾದ ವೇಗದಿಂದ ಬಸ್ ಚಲಾಯಿಸುತ್ತಿದ್ದರಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ  ಕಂದಕಕ್ಕೆ ಉರುಳಿದೆ ಎಂದು ಹೇಳಿದ್ದಾರೆ. ಮಮತಾ ಬಸ್ ಸರ್ವಿಸ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಇದಾಗಿದ್ದು, ದುರ್ಘಟನೆಯಲ್ಲಿ ಹಲವು ಮಂದಿ ನಾಪತ್ತೆಯಾಗಿರುವ ಶಂಕೆ ಇದೆ. ಹೀಗಾಗಿ  ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com