ಡಿಸಿಡಬ್ಲ್ಯೂ ಹಗರಣ: ಆಪ್ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿದ್ದಾರೆ-ಮನೀಶ್ ಸಿಸೋಡಿಯಾ

ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿಯಲ್ಲಿ ಸರ್ಕಾರ ನಡೆಯುತ್ತಿದ್ದು, ಆಪ್ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿದ್ದಾರೆಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ...
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
Updated on: 

ನವದೆಹಲಿ: ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿಯಲ್ಲಿ ಸರ್ಕಾರ ನಡೆಯುತ್ತಿದ್ದು, ಆಪ್ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿದ್ದಾರೆಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಹೇಳಿದ್ದಾರೆ.

ದೆಹಲಿ ಮಹಿಳಾ ಆಯೋಗದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಸಮನ್ಸ್ ಜಾರಿ ಮಾಡಿತ್ತು.

ಇದರಂತೆ ಇಂದು ವಿಚಾರಣೆ ಹಾಜರಾಗುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ದೆಹಲಿಗಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಆದರೆ, ಇದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಜನರು ನಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ನೀಡದೆಯೇ ಎಸಿಬಿಗೆ ನೀಡಲಾಗಿದೆ. ಇದಕ್ಕೆ ನಾವು ಚಿಂತಿಸುವುದಿಲ್ಲ. ಎಲ್ಲರಿಗೂ ನಾವು ಉತ್ತರ ಕೊಡುತ್ತೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com