ಶಶಿಕಲಾ ಭೇಟಿ ಮಾಡಿ ಜಯಾ ಆರೋಗ್ಯ ವಿಚಾರಿಸಿದ ಕರುಣಾನಿಧಿ ಪತ್ನಿ

ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಪತ್ನಿ ರಜತಿ ಅಮ್ಮಾಳ್ ಅವರು ಗುರುವಾರ ರಾತ್ರಿ....
ಜಯಲಲಿತಾ
ಜಯಲಲಿತಾ
Updated on: 
ಚೆನ್ನೈ: ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಪತ್ನಿ ರಜತಿ ಅಮ್ಮಾಳ್ ಅವರು ಗುರುವಾರ ರಾತ್ರಿ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ವಿಚಾರಿಸಿದ್ದಾರೆ. 
ಡಿಎಂಕೆ ಮೂಲಗಳ ಪ್ರಕಾರ, ನಿನ್ನೆ ರಾತ್ರಿ 7.30ರ ಸುಮಾರಿಗೆ ಆಸ್ಪತ್ರೆಗೆ ಭೇಟಿ ನೀಡಿದ ರಜತಿ ಅಮ್ಮಾಳ್ ಅವರು, ಜಯಲಲಿತಾ ಅವರ ಸ್ನೇಹಿತೆ ಶಶಿಕಲಾ ನಟರಾಜನ್ ಅವರನ್ನು ಭೇಟಿ ಮಾಡಿದ್ದಾರೆ.
ರಜತಿ ಅಮ್ಮಾಳ್ ಅವರು ಜಯಲಲಿತಾ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವುದಾಗಿ ಡಿಎಂಕೆ ನಾಯಕರೊಬ್ಬರು ತಿಳಿಸಿದ್ದಾರೆ. ಅಲ್ಲದೆ ಸದ್ಯದಲ್ಲೇ ಕರುಣಾನಿಧಿ ಅವರ ಪುತ್ರಿ ಹಾಗೂ ರಾಜ್ಯಸಭಾ ಸದಸ್ಯೆ ಕನಿಮೋಳಿ ಸಹ ಆಸ್ಪತ್ರೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಹಾಗೂ ಪಕ್ಷದ ಹಿರಿಯ ನಾಯಕರಾದ ಎಸ್.ದುರೈಮುರಗನ್ ಮತ್ತು ಕೆ.ಪೊನಮುಡಿ ಅವರು ಸಹ ಶನಿವಾರ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com