ಸಮಾನ ನಾಗರಿಕ ಸಂಹಿತೆ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರುದ್ಧ ವೆಂಕಯ್ಯ ವಾಗ್ದಾಳಿ

ಸಮಾನ ನಾಗರಿಕ ಸಂಹಿತೆ ಜಾರಿಯನ್ನು ವಿರೋಧಿಸುತ್ತಿರುವ ಮುಸ್ಲಿಂ ಸಂಘಟನೆಗಳ ವಿರುದ್ಧ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು

ನವದೆಹಲಿ: ಸಮಾನ ನಾಗರಿಕ ಸಂಹಿತೆ ಜಾರಿಯನ್ನು ವಿರೋಧಿಸುತ್ತಿರುವ ಮುಸ್ಲಿಂ ಸಂಘಟನೆಗಳ ವಿರುದ್ಧ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸಿರುವ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೆಂಕಯ್ಯ ನಾಯ್ಡು ಸಮಾನ ನಾಗರಿಕ ಸಂಹಿತೆ ಕುರಿತಂತೆ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ. ಆದರೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸರ್ವಾಧಿಕಾರದ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಕಾನೂನು ಆಯೋಗದ ಪ್ರಶ್ನೆಗಳನ್ನು ತಿರಸ್ಕರಿಸುವುದು ಅವರ ಆಯ್ಕೆ, ಆದರೆ ತಮ್ಮ ನಿಲುವುಗಳನ್ನು ಮತ್ತೊಬ್ಬರ ಮೇಲೆ ಹೇರಬಾರದು ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯ ವಿಷಯವಾಗಿ ಎಲ್ಲರು ಚರ್ಚೆಯಲ್ಲಿ ತೊಡಗಬೇಕು ಎಂದು ಕರೆ ನೀಡಿರುವ ವೆಂಕಯ್ಯ ನಾಯ್ಡು, ಈ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ. ಮಹಿಳೆಯರಿಗೆ ಸಮಾನ ಹಕ್ಕು, ಲಿಂಗ ತಾರತಮ್ಯ ಹೋಗಲಾಡಿಸುವುದು ಕೇಂದ್ರ ಸರ್ಕಾರದ ಏಕೈಕ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಕೇಂದ್ರ ಸರ್ಕಾರ ಯಾವುದನ್ನು ಜನರ ಮೇಲೆ ಹೇರುವುದಿಲ್ಲ ಸಮಗ್ರ ಚರ್ಚೆ ಬಳಿಕವೇ ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಿದೆ ಎಂದಿದ್ದಾರೆ ವೆಂಕಯ್ಯ ನಾಯ್ಡು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com