ವಾರಣಾಸಿಯ ರಾಜಘಾಟ್ ಸೇತುವೆ ಮೇಲೆ ಕಾಲ್ತುಳಿತ, 24 ಸಾವು, 22ಕ್ಕೂ ಹೆಚ್ಚು ಮಂದಿಗೆ ಗಾಯ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಉತ್ತರ ಪ್ರದೇಶದ ವಾರಣಾಸಿಯ ಮುಗಲ್ ಸರಾಯಿಯಲ್ಲಿರುವ ಪ್ರಸಿದ್ಧ ರಾಜಘಾಟ್...
ರಾಜಘಾಟ್ ಸೇತುವೆ ಮೇಲೆ ಜನ ಸಾಗರ
ರಾಜಘಾಟ್ ಸೇತುವೆ ಮೇಲೆ ಜನ ಸಾಗರ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಉತ್ತರ ಪ್ರದೇಶದ ವಾರಣಾಸಿಯ ಮುಗಲ್ ಸರಾಯಿಯಲ್ಲಿರುವ ಪ್ರಸಿದ್ಧ ರಾಜಘಾಟ್ ಸೇತುವೆ ಮೇಲೆ ಭೀಕರ ಕಾಲ್ತುಳಿತ ಸಂಭವಿಸಿ 15 ಮಹಿಳೆಯರು ಸೇರಿದಂತೆ 24 ಮಂದಿ ಮೃತಪಟ್ಟಿದ್ದಾರೆ ಮತ್ತು 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ರಾಜಘಾಟ್ ಸೇತುವೆ ಮೂಲಕ ಬಾಬಾ ಜೈ ಗುರುದೇವ್ ಸಭಾ ಆಯೋಜಿಸಿದ್ದ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ದುರಂತಕ್ಕೆ ಸೇತುವೆ ಕುಸಿದು ಬೀಳಲಿದೆ ಎಂಬ ವದಂತಿ ಕಾರಣ ಎನ್ನಲಾಗಿದೆ.
 ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೇವಲ 3 ಸಾವಿರ ಜನರು ಪಾಲ್ಗೊಳ್ಳುವುದಾಗಿ ಪರವಾನಿಗೆ ಪಡೆದಿದ್ದರು. ಆದರೆ ಅಲ್ಲಿ ಲಕ್ಷಾಂತರ ಭಕ್ತರು ಆಗಮಿಸಿದ್ದರಿಂದ ಈ ದುರ್ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಅಲ್ಲದೇ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾಗಲೇ ಸೇತುವೆ ಕುಸಿದಿದೆ ಎಂಬ ಸುಳ್ಳು ಸುದ್ದಿ ಕಾಲ್ತುಳಿತಕ್ಕೆ ಕಾರಣವಾಗಿದೆ ಎಂದು ಜೈ ಗುರುದೇವ್ ಸಂಸ್ಥಾನದ ವಕ್ತಾರ ರಾಜ್ ಬಹದ್ದೂರ್ ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಸಿಎಂ, ಪ್ರಧಾನಿಯಿಂದ ತಲಾ 2 ಲಕ್ಷ ರು. ಪರಿಹಾರ
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪ್ರತ್ಯೇಕವಾಗಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರುಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿಗಳ ಪರಿಹಾರ ಘೊಷಿಸಿದ್ದಾರೆ.
ಮೋದಿ ಸಂತಾಪ: ಕಾಲ್ತುಳಿತದಲ್ಲಿ ಆಗಿರುವ ಪ್ರಾಣಹಾನಿಗೆ ತೀವ್ರ ದುಃಖ ವ್ಯಕ್ತ ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ದುರಂತದಲ್ಲಿ ತೊಂದರೆಗೆ ಒಳಗಾದವರಿಗೆ ಎಲ್ಲ ರೀತಿಯ ನೆರವು ಒದಗಿಸುವಂತೆ ಅಧಿಕಾರಿಗಳನ್ನು ಸಂರ್ಪಸಿ ಸೂಚಿಸಿರುವುದಾಗಿಯೂ ಮೋದಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com