ಎಪಿಜೆ ಅಬ್ದುಲ್ ಕಲಾಂ 85ನೇ ಹುಟ್ಟುಹಬ್ಬ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ದಿವಂಗತ ಎ.ಪಿ.ಜೆ. ಅಬ್ದುಲ್ ಕಲಾಂ ಅವರ 85ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಕಲಾಂ ಅವರಿಗೆ...
ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ದಿವಂಗತ ಎ.ಪಿ.ಜೆ. ಅಬ್ದುಲ್ ಕಲಾಂ
ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ದಿವಂಗತ ಎ.ಪಿ.ಜೆ. ಅಬ್ದುಲ್ ಕಲಾಂ

ನವದೆಹಲಿ: ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ದಿವಂಗತ ಎ.ಪಿ.ಜೆ. ಅಬ್ದುಲ್ ಕಲಾಂ ಅವರ 85ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಕಲಾಂ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಅಬ್ದುಲ್ ಕಲಾಂ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಪ್ರತೀಯೊಬ್ಬ ಭಾರತೀಯನ ಆಲೋಚನೆಯನ್ನು ತಮ್ಮೆಡೆಗೆ ಸೆಳೆದಿದ್ದ ನಮ್ಮ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಿಗೆ ಈ ಮೂಲಕ ಗೌರವ ಸಲ್ಲಿಸುತ್ತಿದ್ದೇನೆಂದು ಹೇಳಿದ್ದಾರೆ.

ಎಪಿಜೆ ಅಬ್ದುಲ್ ಕಲಾಂ ಅವರು 2002ರ ಜುಲೈ 25ರಿಂದ 2007ರ ಜುಲೈ 25ರ ವರೆಗೂ ಭಾರತದ 11ನೇ ರಾಷ್ಟ್ರಪತಿಗಳಾಗಿದ್ದರು. 1997ರಲ್ಲಿ ಭಾರತ ಸರ್ಕಾರ ಕಲಾಂ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಕಲಾಂ ಅವರು ರಾಷ್ಟ್ರಪತಿ ಆಗುವುದಕ್ಕೂ ಮುನ್ನ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಎ) ಮತ್ತು ಇಸ್ರೋದಲ್ಲಿ ವೈಮಾನಿಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು. ಭಾರತಕ್ಕೆ ಕ್ಷಿಪಣಿ ಹಾಗೂ ರಾಕೆಟ್ ತಂತ್ರಜ್ಞಾನವನ್ನು ಪರಿಚಯಿಸಿದ ಅವರನ್ನು ಮಿಸೈಲ್ ಮ್ಯಾನ್ ಆಫ್ ಇಂಡಿಯಾ (ಕ್ಷಿಪಣಿಗಳ ಜನಕ) ಎಂದೇ ಕರೆಯಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com