ದೇಶ

ಕೇಜ್ರಿವಾಲ್ ರ್ಯಾಲಿಗೂ ಮುನ್ನ ಆಪ್ ಶಾಸಕ ಗುಲಾಬ್ ಸಿಂಗ್ ಬಂಧನ

ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಅವರನ್ನು ದೆಹಲಿ ಪೊಲೀಸರು ಭಾನುವಾರ ಗುಜರಾತ್ ನಲ್ಲಿ...

ಕೇಜ್ರಿವಾಲ್ ರ್ಯಾಲಿಗೂ ಮುನ್ನ ಆಪ್ ಶಾಸಕ ಗುಲಾಬ್ ಸಿಂಗ್ ಬಂಧನ
ಗುಲಾಬ್ ಸಿಂಗ್
Published On :
ಸೂರತ್: ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಅವರನ್ನು ದೆಹಲಿ ಪೊಲೀಸರು ಭಾನುವಾರ ಗುಜರಾತ್ ನಲ್ಲಿ ಬಂಧಿಸಿದ್ದಾರೆ.
ಗುಜರಾತ್ ಆಮ್ ಆದ್ಮಿ ಪಕ್ಷದ ಉಸ್ತುವಾರಿಯೂ ಆಗಿರುವ ಗುಲಾಬ್ ಸಿಂಗ್ ಅವರು ದೆಹಲಿ ಪೊಲೀಸರು ಬಂಧಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇಂದು ಸ್ವತಃ ಉಮ್ರಾ ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.
ಸೂರತ್ ನಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ರ್ಯಾಲಿ ನಿಗದಿಯಾಗಿದ್ದು, ರ್ಯಾಲಿಗೂ ಕೆಲವು ಗಂಟೆಗಳ ಮುನ್ನ ಆಪ್ ಶಾಸಕನನ್ನು ವಶಕ್ಕೆ ಪಡೆಯಲಾಗಿದೆ.
ತಮ್ಮ ಸಹಚರರು ಭಾಗಿಯಾಗಿರುವ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಗುಲಾಬ್ ಸಿಂಗ್ ವಿರುದ್ಧ ಇತ್ತೀಚಿಗಷ್ಟೇ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿತ್ತು. ಇದೇ ಪ್ರಕರಣ ಸಂಬಂಧ ಕಳೆದ ತಿಂಗಳು ಸಿಂಗ್ ಚಾಲಕ ಹಾಗೂ ಆತನ ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.