ಒಡಿಶಾ ಬೆಂಕಿ ಅನಾಹುತ: ವಿಷಾದ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಒಡಿಶಾದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಷಾದವ್ಯಕ್ತಪಡಿಸಿದ್ದಾರೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ಭುವನೇಶ್ವರ: ಒಡಿಶಾದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಷಾದವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಘಟನೆಯೊಂದು ಮನ ಕಲಕುವ ದುರಂತವಾಗಿದೆ. ಜೀವ ನಷ್ಟದಿಂದ ದುಃಖದಲ್ಲಿರುವ ಕುಟುಂಬ ಸದಸ್ಯರೊಂದಿಗೆ ಸರ್ಕಾರ ಇರಲಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತಂತೆ ಈಗಾಗಲೇ ಆರೋಗ್ಯ ಸಚಿವ ಜೆ.ಡಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕೇಂದ್ರದ ವತಿಯಿಂದ ಸಾಧ್ಯವಾದಷ್ಟು ಎಲ್ಲಾ ರೀತಿಯ ಸಹಾಯವನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ಗಾಯಾಳುಗಳನ್ನು ಏಮ್ಸ್ ಗೆ ವರ್ಗಾಯಿಸುವಂತೆ ಸೂಚನೆಯನ್ನೂ ನೀಡಲಾಗಿದೆ ಎಂದು ಮೋದಿಯವರು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಸೂಚನೆಯಂತೆಯೇ ಗಾಯಾಳುಗಳನ್ನು ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮುಂಜಾಗ್ರತಾ ಕ್ರಮವಾಗಿ ಏಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ರಜೆಯನ್ನು ರದ್ದು ಮಾಡಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಒಡಿಶಾ ಸರ್ಕಾರ ಉನ್ನತಮಟ್ಟದ ತನಿಖೆಗೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com