

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಇಂದು ಮೊದಲ ಸಚಿವ ಸಂಪುಟ ಸಭೆ ನಡೆಯಿತು.ಸಿಎಂ ಜಯಲಲಿತಾ ಅಪೊಲೋ ಆಸ್ಪತ್ರೆಗೆ ದಾಖಲಾದ ನಂತರ ನಡೆದ ಮೊದಲ ಸಭೆ ಇದಾಗಿತ್ತು.
ಪನ್ನೀರ್ ಸೆಲ್ವಂ ಜಯಲಲಿತಾ ಅವರ ಪೋಟೋವನ್ನು ತಮ್ಮ ಮುಂದೆ ಇಟ್ಟುಕೊಂಡು ಸಂಪುಟ ಸಭೆ ನಡೆಸಿದ್ದು ವಿಶೇಷವಾಗಿತ್ತು.
ಸಭೆಯಲ್ಲಿ ಕಾವೇರಿ ವಿವಾದ, ಸ್ಥಳೀಯ ಸಂಸ್ಥೆಗಳಿಗೆ ವಿಶೇಷ ಅಧಿಕಾರಿಗಳ ನೇಮಕ, ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಅಕ್ಟೋಬರ್ 11 ರಂದು ರಾಜ್ಯಪಾಲ ವಿದ್ಯಾಸಾಗರ್ ಸಿಎಂ ಜಯಲಲಿತಾ ಬಳಿಯಿದ್ದ ಖಾತೆಗಳನ್ನು ಪನ್ನೀರ್ ಸೆಲ್ವಂ ಅವರಿಗೆ ವಹಿಸಿದ್ದರು. ಕಳೆದ 28 ದಿನಗಳಿಂದ ಜಯಲಲಿತಾ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.