ಒಡಿಶಾ ಆಸ್ಪತ್ರೆ ದುರಂತ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಜೆಪಿ. ನಡ್ಡಾ

ಒಡಿಶಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆಪಿ. ನಡ್ಡಾ...
ಕೇಂದ್ರ ಆರೋಗ್ಯ ಸಚಿವ ಜೆಪಿ. ನಡ್ಡಾ
ಕೇಂದ್ರ ಆರೋಗ್ಯ ಸಚಿವ ಜೆಪಿ. ನಡ್ಡಾ
Updated on

ಭುವನೇಶ್ವರ: ಒಡಿಶಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆಪಿ. ನಡ್ಡಾ ಅವರು ಬುಧವಾರ ಹೇಳಿದ್ದಾರೆ.

ದುರ್ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಅಗ್ನಿ ಅವಘಡ ಸಂಭವಿಸುತ್ತಿದ್ದಂತೆಯೇ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚನೆ ನೀಡಿದ್ದರು. ಘಟನೆ ನಿಜಕ್ಕೂ ಆಘಾವನ್ನುಂಟು ಮಾಡಿದೆ. ಇಂತಹ ಘಟನೆಗಳು ನಡೆದಾಗ ಸಾಕಷ್ಟು ನೋವಾಗುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತುತ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಆಸ್ಪತ್ರೆಯಲ್ಲಿ ಕೆಲ ಸುರಕ್ಷತಾ ಕ್ರಮದಲ್ಲಿ ದೋಷಗಳು ಕಂಡಿಬಂದಿರುವುದಾಗಿ ತಿಳಿದುಬಂದಿದೆ. ದುರ್ಘಟನೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com