ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅಪಾಯದಿಂದ ಪಾರು

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ...
ಅಭಿಷೇಕ್ ಬ್ಯಾನರ್ಜಿ - ಮಮತಾ ಬ್ಯಾನರ್ಜಿ
ಅಭಿಷೇಕ್ ಬ್ಯಾನರ್ಜಿ - ಮಮತಾ ಬ್ಯಾನರ್ಜಿ
Updated on
ಕೋಲ್ಕತಾ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಹಾಗೂ ತೃಣಮೂಲ ಕಾಂಗ್ರೆಸ್‌ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಆರೋಗ್ಯದಲ್ಲಿ ಬುಧವಾರ ಚೇತರಿಕೆ ಕಂಡುಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಅಭಿಷೇಕ್ ಬ್ಯಾನರ್ಜಿ ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ. ಅವರು ಸಂಪೂರ್ಣ ಅಪಾಯದಿಂದ ಪಾರಾಗಿದ್ದಾರೆ. ಸಿಟಿ ಸ್ಕ್ಯಾನ್ ವರದಿ ಸಾಮಾನ್ಯವಾಗಿದೆ. ಅಲ್ಲದೆ ಇಂದು ಎಂಆರ್ ಐ ಸ್ಕ್ಯಾನ್ ಸಹ ಮಾಡಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಆಸ್ಪತ್ರೆಯ ಸಿಇಒ ಪಿ.ಟಂಡನ್ ಅವರು ತಿಳಿಸಿದ್ದಾರೆ.
ನಿನ್ನೆ ಮುರ್ಷಿದಾಬಾದ್ ನಿಂದ ಕೋಲ್ಕತಾಗೆ ಮರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಅಭಿಷೇಕ್ ಬ್ಯಾನರ್ಜಿ ಅವರ ಕಾರು ಅಪಘಾತಕ್ಕಿಡಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com