ಪಕ್ಷದ ಮುಖ್ಯಸ್ಥ ಸ್ಥಾನದಿಂದ ಇಳಿಯಲು ಮುಲಾಯಂ ಸಿಂಗ್ ಯಾದವ್ ಗೆ ಅಖಿಲೇಶ್ ಬೆಂಬಲಿಗರಿಂದ ಒತ್ತಾಯ

ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಅವರ ಆಪ್ತ ಎಂಎಲ್ ಸಿ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರನ್ನು ಪಕ್ಷದ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ.
ಮುಲಾಯಂ ಸಿಂಗ್
ಮುಲಾಯಂ ಸಿಂಗ್

ಲಖನೌ: ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಅವರ ಆಪ್ತ ಎಂಎಲ್ ಸಿ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರನ್ನು ಪಕ್ಷದ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ.

ಮೊದಲ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಉದಯ್ ವೀರ್ ಸಿಂಗ್ ಮುಲಾಯಂ ಸಿಂಗ್ ಯಾದವ್ ಗೆ ಪತ್ರ ಬರೆದಿದ್ದು, ಪಕ್ಷದ ಮುಖ್ಯಸ್ಥ ಸ್ಥಾನವನ್ನು ಅಖಿಲೇಶ್ ಯಾದವ್ ಗೆ ಬಿಟ್ಟುಕೊಡುವಂತೆ ಒತ್ತಾಯಿಸಿದ್ದಾರೆ.

ಉದಯ್ ವೀರ್ ಸಿಂಗ್ ಬರೆದಿರುವ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿದ್ದು, ಇದು ಕೇವಲ ತಮ್ಮೊಬ್ಬರ ಅಭಿಪ್ರಾಯವಲ್ಲದೆ ಪಕ್ಷದ ಬಹುತೇಕ ಶಾಸಕರ ಅಭಿಪ್ರಾಯವಾಗಿದೆ ಎಂದು ಉದಯ್ ವೀರ್ ಸಿಂಗ್ ಹೇಳಿದ್ದಾರೆ. ಅಖಿಲೇಶ್ ಯಾದವ್ ವಿರುದ್ಧ ಮುಲಾಯಂ ಸಿಂಗ್ ಅವರ ಎರಡನೇ ಪತ್ನಿ ತಪ್ಪು ಕಲ್ಪನೆಗಳನ್ನು ಮೂಡಿಸುತ್ತಿದ್ದಾರೆ ಎಂದೂ ಉದಯ್ ವೀರ ಸಿಂಗ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. ಅಖಿಲೇಶ್ ಯಾದವ್ ಅವರ ಜನಪ್ರಿಯತೆಯನ್ನು ಮುಲಾಯಂ ಸಿಂಗ್ ಯಾದವ್ ಅವರ ಸಹೋದರ ಶಿವ್ ಪಾಲ್ ಯಾದವ್ ಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಅತ್ಯಂತ ಸಮರ್ಥ ನಾಯಕರಾಗಿದ್ದಾರೆ ಎಂದು ಉದಯ್ ವೀರ್ ಸಿಂಗ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com