ತಾರಕಕ್ಕೇರಿದ ಎಸ್ ಪಿ ಆಂತರಿಕ ಕದನ: ಸಮಾಜವಾದಿ ಪಕ್ಷದ ರಜತ ಸಂಭ್ರಮಕ್ಕೆ ಅಖಿಲೇಶ್ ಗೈರು!

ಉತ್ತರ ಪ್ರದೇಶ ರಾಜಕಾರಣದಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಸಮಾಜವಾದಿ ಪಕ್ಷದ ಆಂತರಿಕ ಭಿನ್ನಮತ ತಾರಕಕ್ಕೇರಿದೆ.
ಅಖಿಲೇಶ್ ಯಾದವ್ ಹಾಗೂ ಮುಲಾಯಂಸಿಂಗ್ ಯಾದವ್ (ಸಂಗ್ರಹ ಚಿತ್ರ)
ಅಖಿಲೇಶ್ ಯಾದವ್ ಹಾಗೂ ಮುಲಾಯಂಸಿಂಗ್ ಯಾದವ್ (ಸಂಗ್ರಹ ಚಿತ್ರ)
Updated on: 

ಲಖನೌ: ಉತ್ತರ ಪ್ರದೇಶ ರಾಜಕಾರಣದಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಸಮಾಜವಾದಿ ಪಕ್ಷದ ಆಂತರಿಕ ಭಿನ್ನಮತ ತಾರಕಕ್ಕೇರಿದೆ.

ಸ್ವತಃ ಸಮಾಜವಾದಿ ಪಕ್ಷದ ಮುಖಸ್ಥ ಮುಲಾಯಂ ಸಿಂಗ್ ಯಾದವ್ ಅವರ ವಿರುದ್ಧ ಅವರ ಪುತ್ರ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿರುಗಿಬಿದ್ದಿದ್ದು,  ಸಮಾಜವಾದಿ ಪಕ್ಷದ ರಜತ ಮಹೋತ್ಸವ ಸಂಭ್ರಮಾಚರಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಅದಕ್ಕಿಂತಲೂ ಮೊದಲೇ ಮುಂದಿನ ವರ್ಷ ನಡೆಯಲಿರುವ  ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಉತ್ತರ ಪ್ರದೇಶ ವಿಧಾನಸಭೆ ಚುನಾವಣಾ ಪ್ರಚಾರವನ್ನು ಸಮಾಜವಾದಿ ಪಕ್ಷ ತನ್ನ ರಜತ ಸಂಭ್ರಮ ಕಾರ್ಯಕ್ರಮದ ಮೂಲಕವಾಗಿ ಆರಂಭಿಸಲು ಚಿಂತಿಸಿತ್ತು. ಇದೇ  ನವೆಂಬರ್ 5 ರಂದು ಸಮಾಜವಾದಿ ಪಕ್ಷದ ರಜತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಲಿದ್ದು, ಅದೇ ಕಾರ್ಯಕ್ರಮದ ಮೂಲಕ ಚುನಾವಣಾ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡಲು  ಮುಲಾಯಂ ಸಿಂಗ್ ಯಾದವ್ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ನವೆಂಬರ್ 5ರಂದು ಸಮಾಜವಾದಿ ಪಕ್ಷ ರಜತ ಮಹೋತ್ಸವ ಆಚರಣೆ ಮಾಡಲಿದ್ದು, ಅಂದು ರಥಯಾತ್ರೆ ಮೂಲಕ  ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಬೇಕು ಎಂದು ತೀರ್ಮಾನಿಸಲಾಗಿತ್ತು. ಆದರೆ ಅಖಿಲೇಶ್ ಯಾದವ್ ಅದಕ್ಕಿಂತಲೂ ಮೊದಲೇ ಅಂದರೆ ನವೆಂಬರ್ 3 ರಂದು ಪ್ರಚಾರ  ಆರಂಭಿಸುವುದಾಗಿ ತಿಳಿಸಿದ್ದಾರೆ. ಅಖಿಲೇಶ್ ಅವರ ಈ ನಡೆಯಿಂದ ಎಸ್ ಪಿ ಪಕ್ಷ ತೀವ್ರ ಮುಜುಗರಕ್ಕೀಡಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com