
ನವದೆಹಲಿ: ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಮೊದಲ ವಿಮಾನದ ಕಾರ್ಯನಿರ್ವಹಣೆ 2017 ರ ಜನವರಿಯಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ವಿಮಾನ ಸಂಪರ್ಕವನ್ನು ಕಾಣದ ಪ್ರದೇಶಗಳಿಗೆ ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ವಿಮಾನ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದ್ದು, ಯುಡಿಎಎನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಎಂಬ ಹೆಸರಿನಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, 10 ವರ್ಷಗಳ ವರೆಗೆ ಕಾರ್ಯನಿರ್ವಹಿಸಲಿದೆ.
ಯುಡಿಎಎನ್ ಯೋಜನೆಯ ಮೊದಲ ವಿಮಾನ 2017 ರ ಜನವರಿಯಿಂದ ಕಾರ್ಯನಿರ್ವಹಿಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಪಿ ಅಶೋಕ್ ಗಜಪತಿ ರಾಜು ತಿಳಿಸಿದ್ದಾರೆ. ಹೊಸ ಯೋಜನೆ ಇತ್ತೀಚೆಗಷ್ಟೇ ಅಂಗೀಕರಿಸಲಾದ ರಾಷ್ಟ್ರೀಯ ನಾಗರಿಕ ವಿಮಾನಯಾನ ನೀತಿಯ ಪ್ರಮುಖ ಅಂಶವಾಗಿದ್ದು, ಪ್ರಾದೇಶಿಕ ವಿಮಾನ ಸಂಪರ್ಕವನ್ನು ಹೆಚ್ಚು ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ತೀರಾ ಕಡಿಮೆ ಪ್ರಮಾಣದಲ್ಲಿ ಬಳಕೆಯಾಗುತ್ತಿರುವ ವಿಮಾನ ನಿಲ್ದಾಣ, ರನ್‌ವೇಗಳಿಂದ ಇನ್ನೊಂದು ಊರಿಗೆ ವಿಮಾನ ಸಂಪರ್ಕ ಕಲ್ಪಿಸುವ ಕಂಪೆನಿಗಳಿಗೆ ಈ ಯೋಜನೆಯ ಅಡಿ ಹಣಕಾಸಿನ ನೆರವು ಸಿಗುತ್ತದೆ. ತೆರಿಗೆ ವಿನಾಯಿತಿ ಕೂಡ ಲಭ್ಯವಾಗುತ್ತದೆ.
Advertisement