

ಶ್ರೀನಗರ: ಭಾರತ- ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ಬಗ್ಗೆ ಮಾತನಾಡಿರುವ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, ಪಾಕಿಸ್ತಾನ ಗಡಿಯಾಚೆಗಿನ ಒಳನುಸುಳುವಿಕೆ ನಿಲ್ಲಿಸಿದರೆ ಮಾತ್ರ ಮಾತುಕತೆ ಸಾಧ್ಯ ಎಂದು ಸ್ಪಷ್ಟಪಡಿಸಿದ್ದಾರೆ.
ಗಡಿ ಭಾಗದಲ್ಲಿ ಒಳನುಸುಳುವಿಕೆಯನ್ನು ತಡೆಗಟ್ಟಿದರೆ ಮಾತ್ರ ಮಾತುಕತೆ ಸಾಧ್ಯ ಎಂಬುದನ್ನು ಪಾಕಿಸ್ತಾನ ಅರ್ಥ ಮಾಡಿಕೊಳ್ಳಬೇಕು ಎಂದು ಮೆಹಬೂಬಾ ಮುಫ್ತಿ ಹೇಳಿದ್ದು, ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯವಾದ ನಂತರವಷ್ಟೇ ವಿವಾದಾತ್ಮಕ ಎಎಫ್ಎಸ್ ಪಿಎ ಕಾಯ್ದೆಯನ್ನು ವಾಪಸ್ ಪಡೆಯಲು ಸಾಧ್ಯ ಎಂದು ಮೆಹಬೂಬಾ ಮುಫ್ತಿ ಸ್ಪಷ್ಟಪಡಿಸಿದ್ದಾರೆ.
"ರಾಜ್ಯದಲ್ಲಿ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ವಾಪಸ್ ಪಡೆಯಬೇಕಾದರೆ ಮೊದಲು ಭಯೋತ್ಪಾದನೆ ಕೊನೆಯಾಗಬೇಕು ಎಂದಿದ್ದು, ಕಲ್ಲು ತೂರಾಟ ನಡೆಸುವುದರಿಂದ ಕಾಶ್ಮೀರದ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಸ್ಥಳೀಯರಿಗೆ ಎಚ್ಚರಿಸಿದ್ದಾರೆ.