ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್‌ ಪರೀಕ್ಷೆ?

ಕೇಂದ್ರ ಸರ್ಕಾರ ಸಿಬಿಎಸ್ ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್ ಪರೀಕ್ಷೆಯನ್ನು ಪುನಃ ಪ್ರಾರಂಭಿಸುವ ಸಾಧ್ಯತೆ ಇದೆ.
ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್‌ ಪರೀಕ್ಷೆ?
ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್‌ ಪರೀಕ್ಷೆ?

ನವದೆಹಲಿ: ಕೇಂದ್ರ ಸರ್ಕಾರ ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ 2018 ರಿಂದ ಬೋರ್ಡ್ ಪರೀಕ್ಷೆಯನ್ನು ಪುನಃ ಪ್ರಾರಂಭಿಸುವ ಸಾಧ್ಯತೆ ಇದೆ.

ಅ.25 ರಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್  ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದು, 2018 ರಿಂದ ಸಿಬಿಎಸ್ಇ ಪಠ್ಯಕ್ರಮದ 10 ನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ.

ಸಿಬಿಎಸ್ಇ 10 ನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಯನ್ನು ಬರೆಯುವ ಪದ್ಧತಿಯನ್ನು 2010 ರಲ್ಲಿ ಅಂದಿನ ಯುಪಿಎ ಸರ್ಕಾರ ತೆಗೆದುಹಾಕಿತ್ತು. ಬೋರ್ಡ್ ಪರೀಕ್ಷೆ ತೆಗೆದುಹಾಕಿರುವುದು ಶಿಕ್ಷಣದ ಗುಣಮಟ್ಟವನ್ನು ಕುಗ್ಗಿಸಿದೆ ಎಂಬ ಅಭಿಪ್ರಾಯ ಶಾಲಾ ಶಿಕ್ಷಕರು ಹಾಗೂ ಪೋಷಕರಿಂದ ವ್ಯಾಪಕವಾಗಿ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್ ಸಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಪ್ರಾರಂಭಿಸುವ ತೀರ್ಮಾನಕ್ಕೆ ಬಂದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇದೆ ವೇಳೆ 5 ನೇ ತರಗತಿ ವರೆಗೂ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಬಡ್ತಿ ನೀಡುವ 'ನೋ- ಡಿಟೆನ್ಷನ್' ನೀತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡುವ ನಿರೀಕ್ಷೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com