ಜಮ್ಮು ಕಾಶ್ಮೀರ ಗಡಿಯಲ್ಲಿ ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಓರ್ವ ಯೋಧನಿಗೆ ಗಾಯ

ಜಮ್ಮು ಕಾಶ್ಮೀರದ ಕತುವಾ ಪ್ರದೇಶದ ಹೀರಾನಗರ್‍ ನಲ್ಲಿ ಇಂದು ಬೆಳಗ್ಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ ಪರಿಣಾಮ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಶ್ರೀನಗರ: ಜಮ್ಮು ಕಾಶ್ಮೀರದ ಕತುವಾ ಪ್ರದೇಶದ ಹೀರಾನಗರ್‍ ನಲ್ಲಿ ಇಂದು ಬೆಳಗ್ಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ ಪರಿಣಾಮ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ.

ಪಾಕಿಸ್ತಾನ ನಡೆಸಿದ ಅಪ್ರಚೋದಿತ ದಾಳಿಗೆ ಭಾರತ ಪ್ರತ್ಯುತ್ತರ ನೀಡಿದೆ, ಎರಡು ಕಡೆಯಿಂದಲೂ ಕಳೆದ 15 ಗಂಟೆಗಳಿಂದಲೂ ಗುಂಡಿನ ಚಕಮಕಿ ನಡೆಯುತ್ತಿದೆ.

ಸೆಪ್ಟೆಂಬರ್ 18 ರಂದು ಉರಿ ವಾಯು ನೆಲೆ ಮೇಲೆ ಉಗ್ರರ ದಾಳಿ ನಡೆದ ನಂತರ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಾ ಬರುತ್ತಿದೆ. ಅಕ್ಟೋಬರ್ 16 ರಂದು ಪಾಕಿಸ್ತಾನದ ಮೇಲೆ ಸೀಮಿತ ದಾಳಿ ನಡೆದ ನಂತರ ಇದುವರೆಗೆ ಪಾಕಿಸ್ತಾನ ಸುಮಾರು 32 ಬಾರಿ ಕದನ ವಿರಾಮ ಉಲ್ಲಂಘಿಸಿದೆ, ಈಗಲೂ ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ಚಕಮಕಿ ಮುಂದುವರಿದಿದೆ .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com