ಆಸ್ಪತ್ರೆ ಅಗ್ನಿ ದುರಂತ: ಒಡಿಶಾ ಆರೋಗ್ಯ ಸಚಿವರ ರಾಜೀನಾಮೆ

ಒಡಿಶಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಅರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್ ರಾಜೀನಾಮೆ ನೀಡಿದ್ದಾರೆ.
ಆಸ್ಪತ್ರೆ ಅಗ್ನಿ ದುರಂತ: ಒಡಿಶಾ ಆರೋಗ್ಯ ಸಚಿವರ ರಾಜೀನಾಮೆ
ಆಸ್ಪತ್ರೆ ಅಗ್ನಿ ದುರಂತ: ಒಡಿಶಾ ಆರೋಗ್ಯ ಸಚಿವರ ರಾಜೀನಾಮೆ

ಭುವನೇಶ್ವರ: ಒಡಿಶಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಅರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್ ರಾಜೀನಾಮೆ ನೀಡಿದ್ದಾರೆ.  ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಅವರಿಗೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕರಿಸಿರುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ. ಸಮ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಒಡಿಶಾ ಸಿಎಂ ನವೀನ್ ಪಾಟ್ನಾಯಕ್ ಆಸ್ಪತ್ರೆಯಲ್ಲಿ ಸುರಕ್ಷತಾ ವೈಫಲ್ಯವನ್ನು ಒಪ್ಪಿಕೊಂಡಿದ್ದರು. ಈ ಬೆನ್ನಲ್ಲೇ ಒಡಿಶಾ ಆರೋಗ್ಯ ಸಚಿವ ಅತುನ್ ಸಬ್ಯಸಾಚಿ ನಾಯಕ್ ರಾಜೀನಾಮೆ ನೀಡಿದ್ದಾರೆ.
20 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಆಸ್ಪತ್ರೆಯಲ್ಲಿ ಸುರಕ್ಷತಾ ವೈಫಲ್ಯ ಕಾರಣ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಾಯಕ್ ತಿಳಿಸಿದ್ದಾರೆ. ಅಗ್ನಿ ದುರಂತ ಸಂಭವಿಸಿದ ಬೆನ್ನಲ್ಲೇ ಆರೋಗ್ಯ ಸಚಿವ ಅತುನ್ ಸಬ್ಯಸಾಚಿ ನಾಯಕ್ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com