ದೇಶ

ಬಹುಮತ ಸಾಬೀತುಪಡಿಸುವಂತೆ ಅಖಿಲೇಶ್ ಯಾದವ್ ಗೆ ಬಿಜೆಪಿ ಸವಾಲು

ಬಹುಮತ ಸಾಬೀತುಪಡಿಸುವಂತೆ ಅಖಿಲೇಶ್ ಯಾದವ್ ಗೆ ಬಿಜೆಪಿ ಸವಾಲು
ಉತ್ತರ ಪ್ರದೇಶ ಬಿಜೆಪಿ
Published On :

ಲಖನೌ: ಸಮಾಜವಾದಿ ಪಕ್ಷದಲ್ಲಿ ನಾಯಕತ್ವದ ವಿಚಾರವಾಗಿ ಭಿನ್ನಮತ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಅಖಿಲೇಶ್ ಯಾದವ್ ಗೆ ಬಿಜೆಪಿ ಸವಾಲು ಹಾಕಿದೆ.
ಸಿಎಂ ಅಖಿಲೇಶ್ ಯಾದವ್ ಶಿವಪಾಲ್ ಯಾದವ್ ಸೇರಿದಂತೆ 4 ಸಚಿವರನ್ನು ವಜಾಗೊಳಿಸಿರುವುದು ಹಾಗೂ ಇದಕ್ಕೆ ಪ್ರತಿಯಾಗಿ ಸಮಾಜವಾದಿ ಪಕ್ಷ ಅಖಿಲೇಶ್ ಯಾದವ್ ಅವರ ಬೆಂಬಲಿಗರಾದ ರಾಮ್ ಗೋಪಾಲ್ ಯಾದವ್ ಅವರನ್ನು ಉಚ್ಛಾಟಿಸಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಅಖಿಲೇಶ್ ಯಾದವ್ ಗೆ ಬಹುಮತ ಸಾಬೀತುಪಡಿಸುವಂತೆ ಸವಾಲು ಹಾಕಿದೆ. ಉತ್ತರ ಪ್ರದೇಶದ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಂಡಿದ್ದು ಅಖಿಲೇಶ್ ಯಾದವ್ ಬಹುಮತ ಸಾಬೀತುಪಡಿಸಲಿ ಎಂದು ಬಿಜೆಪಿ ರಾಜ್ಯಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಒತ್ತಾಯಿಸಿದ್ದಾರೆ.  ಉತ್ತರ ಪ್ರದೇಶದಲ್ಲಿ ಕುಟುಂಬ ರಾಜಕಾರಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು ಜನರ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಮೌರ್ಯ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.