
ನವದೆಹಲಿ: ಗಡಿಯಲ್ಲಿ ಗುಂಡಿನ ಚಕಮಕಿ ವೇಳೆ ದೇಶಕ್ಕಾಗಿ ಹೋರಾಡಿ ಹುತಾತ್ಮನಾಗಿರುವ ಗುರ್ನಾಮ್ ಸಿಂಗ್ ಅವರು ಯೋಧರ ತ್ಯಾಗಕ್ಕೆ ಉತ್ತಮ ನಿದರ್ಶನರಾಗಿದ್ದಾರೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಬಿಎಸ್ಎಫ್ ಯೋಧ ಗುರ್ನಾಮ್ ಸಿಂಗ್ ಅವರ ಅಗಲಿಕೆ ಸಾಕಷ್ಟು ನೋವನ್ನುಂಟು ಮಾಡಿದೆ. ಯೋಧರ ತ್ಯಾಗಕ್ಕೆ ಗುರ್ನಾಮ್ ಅವರು ಉದಾಹರಣೆಯಾಗಿದ್ದಾರೆ. ಹುತಾತ್ಮ ಯೋಧನ ಕುಟುಂಬ ಕುರಿತು ಸಂತಾಪವನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ.
ಅ.20ರಂದು ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಗುರ್ನಾಮ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದರು. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುವ ಮೂಲಕ ಪಾಕಿಸ್ತಾನದ ಓರ್ವ ಉಗ್ರ ಸೇರಿದಂತೆ 7 ಸೈನಿಕರನ್ನು ಹತ್ಯೆ ಮಾಡಿತ್ತು.
Advertisement