ಪಾಕ್'ನಿಂದ ಅಪ್ರಚೋದಿತ ದಾಳಿ: ಓರ್ವ ಯೋಧ, ಬಾಲಕ ಸಾವು

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರ ರೇಖೆ ಬಳಿ ಪಾಕಿಸ್ತಾನ ನಿರಂತರ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರ ರೇಖೆ ಬಳಿ ಪಾಕಿಸ್ತಾನ ನಿರಂತರ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಓರ್ವ ಯೋಧ ಹಾಗೂ ಓರ್ವ ಬಾಲಕ ಮೃತಪಟ್ಟಿದ್ದಾರೆ. ಅಲ್ಲದೆ ಓರ್ವ ಯೋಧ ಸೇರಿದಂತೆ ಏಳು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಹುತಾತ್ಮರಾದ ಯೋಧ ಸುಶೀಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಎಂಟು ವರ್ಷದ ಬಾಲಕ ಸಹ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಡಿ ಭದ್ರತಾ ಪಡೆಯ ಓರ್ವ ಯೋಧ ಸೇರಿದಂತೆ ಗಾಯಗೊಂಡ ಎಲ್ಲಾ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನಛಕ್, ಅಖ್ನೂರ್, ಅರ್ನಿಯಾ ಮತ್ತು ಇನ್ನಿತರೆ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ. ಭಾರತೀಯ ಸೇನೆ ಹಾಗೂ ಪಾಕಿಸ್ತಾನ ಸೇನೆ ಮಧ್ಯೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 
ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಪಾಕಿಸ್ತಾನ ಸೇನೆ ಭಾರತೀಯ ಸೇನಾ ಶಿಬಿರದ ಮೇಲೆ ಶೆಲ್ ದಾಳಿ ನಡೆಸಿದೆ. ಇದರಿಂದ ಇಬ್ಬರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
ಭಾರೀ ಪ್ರಮಾಣದ ಗುಂಡಿನ ಚಕಮಕಿ ನಡೆಯುತ್ತಿರುವುದರ ಪರಿಣಾಮ ಗಡಿಯಲ್ಲಿ ನೆಲೆಸಿದ್ದ ಜನರ ಸಾಕಷ್ಟು ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com